ನೈಋತ್ಯ ಚೀನಾದಲ್ಲಿ ಉರುಳಿಬಿದ್ದ ಟ್ರಕ್ : ಏಳು ಮಂದಿ ದುರ್ಮರಣ
ಕುನ್ಮಿಂಗ್, ಡಿ 8: ನೈಋತ್ಯ ಚೀನಾದ ಯುನಾನ್ ಪ್ರಾಂತ್ಯದಲ್ಲಿ ಹೆದ್ದಾರಿಯಲ್ಲಿ ಭಾರಿ ಟ್ರಕ್ ತಲೆಕೆಳಗಾದ ಪರಿಣಾಮ ಏಳು ಜನರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ವೆನ್ಷಾನ್ ನಗರದಲ್ಲಿ ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿನ ರಕ್ಷಣಾ ತಡೆಗೋಡೆಗೆ ಟ್ರಕ್ ಗುದ್ದಿದ ಪರಿಣಾಮ ಉರುಳಿ ಬಿದ್ದಿದ್ದು ಟ್ರಕ್ ಕೆಳಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಚಿಕ್ಕ ಕಾರ್ ಹಾಗೂ ದ್ವಿಚಕ್ರವಾಹನ ಸಿಲುಕಿಹಾಕಿಕೊಂಡಿದೆ. ಈ ದುರ್ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪ್ರಾಧಿಕಾರ ತಿಳಿಸಿದೆ. ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 