ಪಿಎಚ್. ಪೂಜಾರ ಗೆಲುವು ಖಚಿತ: ಶಾಸಕ ರಮೇಶ
ಸಿಂದಗಿ : ಸಿಂದಗಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರ ಗೆಲುವು ಖಚಿತ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ತಾಲೂಕಿನ ಬೋಮ್ಮನಳ್ಳಿ ಗ್ರಾಪಂ ಸದಸ್ಯರಿಗಾಗಿ ಹಮ್ಮಿಕೊಂಡ ಸಭೆಯಲ್ಲಿ ಬಾಗಲಕೋಟೆ-ವಿಜಯಪುರ ವಿಧಾನಪರಿಷತ್ ಚುನಾವಣೆಯ ನಿಮಿತ್ತ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರಿಗೆ ಅತಿ ಹೆಚ್ಚು ಮತ ಕೊಟ್ಟು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.
ಬೋಮ್ಮನಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರಿಗೆ ನೀರೀಕ್ಷೆ ಮೀರಿ ಮತ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಬಿಜೆಪಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಎಚ್.ಬಿರಾದಾರ ಮಾತನಾಡಿ, ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರಿಗೆ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.
ಗಾಂಧಿಗೌಡ ಪಾಟೀಲ ಸೇರಿದಂತೆ ಬೋಮ್ಮನಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಭಾಗವಹಿಸಿದ್ದರು.