ಬಳ್ಳಾರಿ

ನವೆಂಬರ್ 12ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಬಳ್ಳಾರಿಗೆ

ನವೆಂಬರ್ 12ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಬಳ್ಳಾರಿಗೆ
P.T. Parameshwara Naik, Vice-Chairman of the Guarantee Schemes Implementation Authority, to visit Ba

ಲೋಕದರ್ಶನ ವರದಿ 

                ಬಳ್ಳಾರಿ,ನ.06 :  ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಅವರು ನವೆಂಬರ್ 12ರಂದು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿ ಪ್ರವಾಸ ಕೈಗೊಳ್ಳಲಿದ್ದಾರೆ. 

ನವೆಂಬರ್ 12 ರಂದು ಮಧ್ಯಾಹ್ನ 2.30 ಕ್ಕೆ ಹೊಸಪೇಟೆಯಿಂದ ಹೊರಟು, ಮಧ್ಯಾಹ್ನ 3.30ಕ್ಕೆ ಬಳ್ಳಾರಿಗೆ ತಲುಪಲಿದ್ದಾರೆ. 

ಮಧ್ಯಾಹ್ನ 3:30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳೊಂದಿಗೆ ಪರೀಶೀಲನಾ ಸಭೆ ನಡೆಸುವರು. 

ಅಂದು ಬಳ್ಳಾರಿಯಲ್ಲೇ ವಾಸ್ತವ್ಯ ಹೂಡಲಿರುವ ಉಪಾಧ್ಯಕ್ಷರು, ನವೆಂಬರ್ 13ರಂದು ಹೂವಿನ ಹಡಗಲಿಗೆ ಪ್ರಯಾಣಿಸುವರು ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. 


ಸುದ್ದಿ ಓದಿ