ಕಾಲಾಳುಪಡೆ ದಿನದ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ, ಅ 27 : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಲಾಳುಪಡೆ ದಿನದ ಶುಭ ಕೋರಿದ್ದಾರೆ.ಕಾಲಾಳುಪಡೆ ದಿನದ ವಿಶೇಷ ಸಂದರ್ಭದಲ್ಲಿ ನಮ್ಮ ಧೈರ್ಯಶಾಲಿ ಯೋಧರಿಗೆ ಶುಭಾಶಯಗಳು. ನಮ್ಮ ರಾಷ್ಟ್ರವನ್ನು ರಕ್ಷಿಸುವಲ್ಲಿ ಈ ಪಡೆ ವಹಿಸಿದ ಪಾತ್ರದ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಅವರ ಧೈರ್ಯವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.