ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ನವದೆಹಲಿ, ಅ 20 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ, ಯಾವ ವಿಷಯ ಕುರಿತಂತೆ ಪ್ರಧಾನಿ ದೇಶದ ಜನತೆಗೆ ಸಂದೇಶ ನೀಡಲಿದ್ದಾರೆ ಎಂಬುದರ ವಿವರ ಲಭ್ಯವಾಗಿಲ್ಲ. ಮಾರ್ಚ್‌ನಲ್ಲಿ ಲಾಕ್ ಡೌನ್ ವಿಧಿಸಿದ ದಿನದಿಂದ ನಂತರ ಪ್ರಧಾನಿ ಮೋದಿ ಹಲವು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ದೇಶದ ಜನರಿಗೆ ತಾವೊಂದು ವಿಷಯ ಹೇಳಬೇಕಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಆದರೆ, ಆ ಭಾಷಣದಲ್ಲಿ ಯಾವ ವಿಷಯ ಕೇಂದ್ರೀಕೃತವಾಗಿರಲಿದೆ ಎಂಬುದು ದೇಶದ ಜನರಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಮೋದಿ ಅವರು ಇತ್ತೀಚೆಗೆ ಕೊರೊನಾ ಬಗ್ಗೆ ಹಲವು ಬಾರಿ ಮಾತನಾಡಿದ್ದಾರೆ. ಆದರೆ, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ, ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,000 ಕ್ಕಿಂತ ಕಡಿಮೆ ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ಟ್ವೀಟ್‌ನಲ್ಲಿ ಈ ವಿಷಯ ತಿಳಿಸಿದೆ.