ಸಿಂಧಗಿ

ದೇಶವನ್ನು ಮಾದರಿ ಮಾಡುವಲ್ಲಿ ಪ್ರಧಾನಿ ಮೋದಿ ಕೊಡುಗೆ ಅಪಾರ: ಸೋಮಣ್ಣ

ದೇಶವನ್ನು ಮಾದರಿ ಮಾಡುವಲ್ಲಿ ಪ್ರಧಾನಿ ಮೋದಿ ಕೊಡುಗೆ ಅಪಾರ: ಸೋಮಣ್ಣ
ಸಿಂದಗಿ: ಗಣಿಹಾರ ಗ್ರಾಮದಲ್ಲಿ ಸಚಿವ ವಿ.ಸೋಮಣ್ಣ ಮತಯಾಚನೆ ಮಾಡಿ ಮಾತನಾಡಿದರು.

ಸಿಂದಗಿ 19: ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜನತೆಯ ಕಲ್ಯಾಣಕ್ಕಾಗಿ ದುಡಿಯುತ್ತಿದೆ. ಈ ದೇಶವನ್ನು ಮಾದರಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅಪಾರ. ಜಗತ್ತಿನಲ್ಲಿಯೇ ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ತರುವಲ್ಲಿ ಕೇಂದ್ರದ ಕಾರ್ಯ ನಿಜಕ್ಕೂ ಶ್ಲಾಘನೀಯ ಸಚಿವ ವಿ. ಸೋಮಣ್ಣ ಹೇಳಿದರು. 

ತಾಲೂಕಿನ ಗಣಿಹಾರ ಗ್ರಾಮದಲ್ಲಿ ಉಪಚುನಾವಣಾ ಪ್ರಚಾರ ನಿಮಿತ್ತ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಮನೆ ಮನೆಗೆ ಪಾದಯಾತ್ರೆ ಮೂಲಕ ಮತಯಾಚನೆ ಮಾಡಿ  ಮಾತನಾಡಿದರು. 

ಸಿಂದಗಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಸೇವೆ ಈ ಕ್ಷೇತ್ರಕ್ಕೆ ಪುನಃ ಬೇಕಾಗಿದೆ. ಮತದಾರರು ಬಿಜೆಪಿಗೆ ಮತ ನೀಡಿ ಈ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸಿ ಎಂದು ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. 

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡಿರುವ ಅಭಿವೃದ್ದಿ ಯೋಜನೆಗಳ ಮೂಲಕ ಸಿಂದಗಿ ಉಪಚುಣಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಾಗಲಿದೆ. ರಾಜ್ಯ ಸರ್ಕಾರ ಶಿಕ್ಷಣ, ಕೈಗಾರಿಕೆ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಣನೀಯಕೊಡುಗೆ ನೀಡುತ್ತಲೆ ಬಂದಿದೆ. ಆದ್ದರಿಂದ ಮತದಾರರು ಬಿಜೆಪಿಯ ಕಮಲದ ಚಿಹ್ನೆಗೆ ಮತ ನೀಡಿ ರಮೇಶ ಭೂಸನೂರ ಅವರನ್ನು ಆಶೀರ್ವದಿಸಿ ಎಂದು ಮನವಿ ಮಾಡಿಕೊಂಡರು. 

ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಮಾತನಾಡಿ, ಜನರ ಮನದಲ್ಲಿ ಶಾಸ್ವತವಾಗಿ ಉಳಿಯುವ ರೀತಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಮಾಡಿದ ತೃಪ್ತಿ ತಮಗಿದೆ. ಮುಂದಿನ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಲು ನಿಮ್ಮ ಮತ ನೀಡಿ ಪುನಃ ಗೆಲ್ಲಿಸಿ ತರಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು. 

ಸಂಸದ ರಮೇಶ ಜಿಗಜಿಣಗಿ ಅವರು ಮಾತನಾಡುತ್ತಾ ಶಾಸಕ ರಮೇಶ ಭೂಸನೂರ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.  ಅವರ ಗೆಲುವಿಗಾಗಿ ಮತದಾರರು ಆಶೀರ್ವದಿಸಬೇಕು ಎಂದು ಮನವಿ ಮಾಡಿಕೊಂಡರು.  

ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಗ್ರಾಪಂ ಸದಸ್ಯ ನಿಂಗಣ್ಣ ಬಿಸನಾಳ ಸೇರಿದಂತೆ ಪಕ್ಷದ ಮುಕಂಡರು ಮತಯಾಚನೆಯಲ್ಲಿ ಭಾಗವಹಿಸಿದ್ದರು. 

ನಂತರ ಅಭ್ಯರ್ಥಿ ರಮೇಶ ಭೂಸನೂರ ಸೇರಿದಂತೆ ಸಂಸದ ರಮೇಶ ಜಿಗಜಿಣಗಿ, ಸಚಿವ ವಿ. ಸೋಮಣ್ಣ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಗ್ರಾಮದಲ್ಲಿ ಪಾದ ಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.  

ಸುದ್ದಿ ಓದಿ