ತಿರುಚಿರಾಪಳ್ಳಿ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ
ಚೆನ್ನೈ, ನ. 23 : ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
‘ಎಕ್ಸ್’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಮೋದಿ, ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ತಲಾ ₹2 ಲಕ್ಷ ಹಾಗೂ ಗಾಯಗೊಂಡ ಪ್ರತಿಯೊಬ್ಬರಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ. ಈ ಪರಿಹಾರವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ನೀಡಲಾಗುವುದು.