ರಾಷ್ಟ್ರೀಯ

ಜಾನ್ಸಿ ಕೃಷಿ ವಿವಿ ಉದ್ಘಾಟಿಸಿದ ಪ್ರಧಾನಿ ಮೋದಿ

ಜಾನ್ಸಿ ಕೃಷಿ ವಿವಿ ಉದ್ಘಾಟಿಸಿದ ಪ್ರಧಾನಿ ಮೋದಿ

ಜಾನ್ಸಿ,ಆಗಸ್ಟ್ 29: ಉತ್ತರಪ್ರದೇಶದ ಜಾನ್ಸಿಯ ಹಿಂದುಳಿದ ಬುಂಡೆಲ್ಕಂಡ್ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ರಾಣಿ ಲಕ್ಷ್ಮಿ ಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯವನ್ನು ಪ್ರಧಾನಿ ನರೇಂದ್ರ ಮೋದಿ) ಉತ್ತರಪ್ರದೇಶದ ಜಾನ್ಸಿಯ ಹಿಂದುಳಿದ ಬುಂಡೆಲ್ಕಂಡ್ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ರಾಣಿ ಲಕ್ಷ್ಮಿ ಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮತ್ತಿತರರ ಜನಪ್ರತಿನಿಧಿಗಳು, ಕೃಷಿ ತಜ್ಞರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 50 ಸಾವಿರ ಜನರು ಪಾಲ್ಗೊಂಡಿದ್ದರು. ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 101 ಸಂಸ್ಥೆಗಳು, 75 ಕೃಷಿ ವಿವಿ ಮತ್ತು

721 ಕೃಷಿ ವಿಜ್ಞಾನ ಕೇಂದ್ರಗಳ ಪ್ರತಿನಿಧಿಗಳು ಹಾಜರಿದ್ದರು.


2009ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಜಾನ್ಸಿ ವಿವಿ ನಿರ್ಮಾಣದ ಘೋಷಣೆ ಮಾಡಲಾಗಿತ್ತು.  ಆದರೆ, 2014ರ ಮಾ.5ರಂದು ಅದರ ಅಧಿಸೂಚನೆ ಹೊರಬಿದ್ದಿತ್ತು. ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಡಿಯಲ್ಲಿ ಕಾಮಗಾರಿ ಆರಂಭಗೊಂಡಿತ್ತು.


ಸುದ್ದಿ ಓದಿ