ರಾಷ್ಟ್ರೀಯ

ನಿವಾರ್ ಚಂಡಮಾರುತ; ತಮಿಳುನಾಡು, ಪುದುಚೆರಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

ನಿವಾರ್ ಚಂಡಮಾರುತ; ತಮಿಳುನಾಡು, ಪುದುಚೆರಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಚೆನ್ನೈ, ನವೆಂಬರ್ 24: ತಮಿಳುನಾಡು ಮತ್ತು ಪುದುಚೆರಿಯಲ್ಲಿ ಆತಂಕ ಮೂಡಿಸಿರುವ 'ನಿವಾರ್‌' ಚಂಡಮಾರುತದ ಹಾನಿ ಮತ್ತು ತೆಗೆದುಕೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚರ್ಚೆ ನಡೆಸಿದರು.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಚಂಡಮಾರುತದ ಹಾನಿ ತಡೆಯುವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಜೊತೆಗೆ, ರಾಜ್ಯ ಸರ್ಕಾರಕ್ಕೆ ಎಲ್ಲಾ ಅಗತ್ಯ ಸಹಾಯ ಮತ್ತು ಸಹಕಾರ ನೀಡುವ ಭರವಸೆ ನೀಡಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, "ತಮಿಳುನಾಡು ಸಿಎಂ ಎಡಪ್ಪಾಡಿ ಮತ್ತು ಪುದುಚೆರಿ ಸಿಎಂ ವಿ.ನಾರಾಯಣಸ್ವಾಮಿ ಅವರೊಂದಿಗೆ ನಿವಾರ್‌ ಚಂಡಮಾರುತದ ಪರಿಣಾಮಗಳ ಕುರಿತು ಮಾತುಕತೆ ನಡೆಸಿದ್ದೇನೆ" ಎಂದು ಮಾಹಿತಿ ನೀಡಿದ್ದಾರೆ.

"ಚಂಡಮಾರುತ ಪೀಡಿತ ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗಾಗಿ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದೇನೆ" ಎಂದಿದ್ದಾರೆ.

ಸುದ್ದಿ ಓದಿ