ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ
ನವ ದೆಹಲಿ, ಜುಲೈ 16 : ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.
ಆರು ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ, ವ್ಯಾಕ್ಸಿನೇಷನ್ ಪ್ರಕ್ರಿಯೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಂಡರು. ವಿಡಿಯೋ ಸಮ್ಮೇಳನದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದ್ದು ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರವನ್ನು ಪ್ರಧಾನಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.