ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗೆ ಇಂದು ಪ್ರಧಾನಿ ಚಾಲನೆ: ವಿದ್ಯಾರ್ಥಿಗಳೊಂದಿಗೆ ಸಂವಾದ
ನವದೆಹಲಿ, ಆಗಸ್ಟ್ 1:ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆಯೋಜಿಸಿರುವ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ 4.30ಕ್ಕೆ ಹ್ಯಾಕಥಾನ್ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಕ್ರಿಯಾಶೀಲ ಮತ್ತು ನಾವಿನ್ಯತೆ ಹೊಂದಿರುವ ವಿದ್ಯಾರ್ಥಿಗಳಿಂದ
ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಕೆಲವು ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ವೇದಿಕೆ ಒದಗಿಸಿದೆ. ಇದು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಾಗಿದ್ದು, ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ.
ದೇಶಾದ್ಯಂತ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಟ್ಟಿಗೆ ಸಂಪರ್ಕಿಸಲು ಗ್ರ್ಯಾಂಡ್ ಫಿನಾಲೆಯನ್ನು ಆನ್‌ಲೈನ್‌ನಲ್ಲಿ ಆಯೋಜಿಸಲಾಗುತ್ತದೆ. ಇದಕ್ಕಾಗಿ ಸುಧಾರಿತ ಆನ್‌ಲೈನ್ ವೇದಿಕೆಯನ್ನು ವಿಶೇಷವಾಗಿ ಸ್ಥಾಪಿಸಲಾಗಿದೆ. ೩೭ ಕೇಂದ್ರ ಸರ್ಕಾರಿ ಇಲಾಖೆಗಳು, ೧೭ ರಾಜ್ಯ ಸರ್ಕಾರಗಳು ಮತ್ತು ೨೦ ಕೈಗಾರಿಕೆಗಳಿಂದ ಬಂದ ೨೪೩ ಸಮಸ್ಯೆಗಳನ್ನು ಪರಿಹರಿಸುವುದು ಈ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಉದ್ದೇಶವಾಗಿದೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜತೆ ಕೇಂದ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ರ ಬಗ್ಗೆಯೂ ಪ್ರಧಾನಮಂತ್ರಿ ಮಾತನಾಡಲಿದ್ದು, ವಿದ್ಯಾರ್ಥಿಗಳಿಂದ ಅಭಿಪ್ರಾಯ ಪಡೆಯಲಿದ್ದಾರೆ.