ಪಿಎಂಡಿಡಿಕೆವೈ ಅತ್ಯುತ್ತಮ ಸಾಧನೆ: ಜಿಲ್ಲಾಧಿಕಾರಿಗಳಿಗೆ ಸನ್ಮಾನ
ಲೋಕದರ್ಶನ ವರದಿ
ಹಾವೇರಿ 12: ಪ್ರಧಾನ ಮಂತ್ರಿ ಧನ್- ಧಾನ್ಯ ಕೃಷಿ ಯೋಜನೆ ಯಡಿ ಜಿಲ್ಲೆಯಲ್ಲಿ ಉತ್ತಮ ಸಾಧೆನ ಮಾಡಿದ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಸೋಮವಾರ ಜರುಗಿದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಾಹಾಂತೇಶ ದಾನಮ್ಮನವರ ಅವರಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.
ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಶ್ಲಾಘನೀಯವಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಇತರರು ಪ್ರಮಾಣಪತ್ರ ವಿತರಿಸಿದರು. ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಸಹ ಭಾಗವಹಿಸಿದ್ದರು.