ಪ್ರಭಾಸ್ ಗೆ ಹುಟ್ಟಹಬ್ಬಕ್ಕೆ ಶುಭ ಕೋರಿದ ದೀಪಿಕಾ
ಮುಂಬೈ, ಅ 23 : ಇದೇ ಮೊದಲ ಬಾರಿಗೆ ಪ್ರಭಾಸ್ ಗೆ ನಾಯಕಿಯಾಗಿ ನಟಿಸುತ್ತಿರುವ ದೀಪಿಕಾ ಪಡುಕೋಣೆ, ಪ್ರಭಾಸ್ ಹುಟ್ಟು ಹಬ್ಬದಂದು ಶುಭ ಹಾರೈಸಿದ್ದಾರೆ.ಮಹಾನಟಿ ಸಿನಿಮಾ ಖ್ಯಾತಿಯ ನಿರ್ದೇಶಕ ನಾಗ್ ಅಶ್ವಿನ್ ಸಿನಿಮಾದಲ್ಲಿ ದೀಪಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್ ಸಹ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿರುವ ಪ್ರಭಾಸ್ ಮತ್ತು ದೀಪಿಕಾ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ 'ಹುಟ್ಟುಹಬ್ಬದ ಶುಭಾಶಯಗಳು ಪ್ರಭಾಸ್. ನಿಮಗೆ ಯಾವಾಗಲು ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಉತ್ತಮ ವರ್ಷ ನಿಮ್ಮದಾಗಲಿ' ಎಂದು ಬರೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ವಿಶ್ ಮಾಡಿ ಪೋಸ್ಟ್ ಹಾಕಿದ್ದಾರೆ. ಪ್ರಭಾಸ್ ಫೋಟೋ ಶೇರ್ ಮಾಡಿ, ಹುಟ್ಟುಹಬ್ಬದ ಸಂದೇಶ ರವಾನಿಸಿದ್ದಾರೆ.