ಬೈಕ್ ಸ್ಕೀಡ್ ಆಗಿ ಪ್ರಾಣಬಿಟ್ಟ ಪಿಎಸ್ ಐ
ಬೆಳಗಾವಿ,
ಏ.18, ಲಾಕ್ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ಐ ಓರ್ವರು
ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ಶನಿವಾರ
ನಡೆದಿದೆ.ಖಡೇಬಜಾರ್ ಪೊಲೀಸ್ ಠಾಣೆಯ ಮನೋಹರ್ ಗಣಾಚಾರಿ ಮೃತಪಟ್ಟ ಪಿಎಸ್ಐ.
ಯಳ್ಳೂರು ಗ್ರಾಮದಿಂದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್
ಬಂದೊಬಸ್ತ್ ಕರ್ತವ್ಯಕ್ಕಾಗಿ ಬರುತ್ತಿದ್ದಾಗ ಯಳ್ಳೂರು ಸಮೀಪದ ಕೆಎಲ್ ಇ ಆಸ್ಪತ್ರೆ
ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದೆ.
ಪ್ರಾಣಿಯನ್ನು ಉಳಿಸಲು ಹೋಗಿ ಸ್ಕಿಡ್ ಆಗಿ ಅವರು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ
ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ
ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಮನೋಹರ ಗಣಾಚಾರಿ ಅವರು, ಆರು ತಿಂಗಳ
ಹಿಂದಷ್ಟೇ ಬಡ್ತಿ ಹೊಂದಿ ಪಿಎಸ್ಐ ಆಗಿದ್ದರು. ಕಳೆದ ವರ್ಷ ಯಳ್ಳೂರಿನಲ್ಲಿ ಮನೆ
ಕಟ್ಟಿಸಿದ್ದು, ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು.
ಅಷ್ಟರಲ್ಲೇ ಈ ದುರಂತ ಸಂಭವಿಸಿದೆ.ಮೃತರು ಪತ್ನಿ, ಪುತ್ರ, ಮತ್ತು ತಂದೆ ಸೇರಿದಂತೆ ಅಪಾರ
ಬಂಧು ಬಳಗವನ್ನು ಅಗಲಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 