ವಿದ್ಯಾರ್ಥಿ ಶವ ಹುಡುಕಾಟಕ್ಕೆ ಕೆರೆಗಿಳಿದ ಪಿಎಸ್‌ಐ
PSI enters lake to search for student's body
ಕುಮಟಾ 23 : ಜಡ್ಡಿಕೆರೆಯಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಮೃತದೇಹಕ್ಕಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಕುಮಟಾ ಠಾಣೆಯ ಪಿಎಸ್‌ಐ ಖಾದರ್ ಭಾಷಾ ಅವರು ಸ್ವತಃ ಕೆರೆಗಿಳಿದು ಮಾನವೀಯತೆ ಮೆರೆದರು. ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪದ ಜಡ್ಡಿಕೆರೆಯಲ್ಲಿ ಹೆಗಡೆ ಗ್ರಾಮದ ಗುನಗನಕೊಪ್ಪ ನಿವಾಸಿ ಪ್ರಶಾಂತ ಕೇಶವ ಮುಕ್ರಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಶೋಧ ಕಾರ್ಯ ನಡೆಸಿದರು. ಈ ವೇಳೆ ಪಿಎಸ್‌ಐ ಖಾದರ್ ಭಾಷಾ ಅವರೂ ನೀರಿಗಿಳಿದು ಸಿಬ್ಬಂದಿಯೊಂದಿಗೆ ಮೃತದೇಹಕ್ಕಾಗಿ ಹುಡುಕಾಟ ನಡೆಸಿ, ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯದಲ್ಲಿ ಕೈಜೋಡಿಸಿದರು. ಘಟನೆ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 