ಪಹಲ್ಗಾಮ್ ಉಗ್ರರ ದಾಳಿ ಖಂಡನೀಯ: ಮುಖಂಡ ಮಾನಸಿಂಗ್

Pahalgam terrorist attack condemnable: Leader Mansingh

ತಾಳಿಕೋಟಿ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿ ಅತ್ಯಂತ ಹೇಯ ಕೃತ್ಯವಾಗಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಮಾನಸಿಂಗ್ ಕೊಕಟನೂರ ಹೇಳಿದರು.  

ಪತ್ರಿಕೆಯೊಂದಿಗೆ ಮಾತನಾಡಿದ ಅವರು ಪ್ರವಾಸಿಗರ ನರಮೇದ ಅತ್ಯಂತ ಹೇಯ ಕೃತ್ಯವಾಗಿದ್ದು ಇದು ದೇಶದ ಪ್ರತಿಯೊಬ್ಬರಿಗೂ ನೋವಿನ ಸಂಗತಿಯಾಗಿದೆ.ಈ ದಾಳಿಯಲ್ಲಿ ನಮ್ಮ ರಾಜ್ಯದ ಇಬ್ಬರು ಬಲಿಯಾಗಿರುವುದು ಅತೀವ ದುಃಖದ ಸಂಗತಿ, ಕೇಂದ್ರ ಸರ್ಕಾರ ತಕ್ಷಣವೇ ಭದ್ರತಾ ಕ್ರಮಗಳನ್ನು ಬಲಪಡಿಸಿ ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ ಅವರು ಮೃತ ಕುಟುಂಬಗಳಿಗೆ ಸಾಂತ್ವನ ತಿಳಿಸಿ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.