ಅಮೃತ ವರ್ಷಿಣಿ ವಿದ್ಯಾಲಯದಲ್ಲಿ ಚಿತ್ರಕಲಾ ಸ್ಪರ್ಧೆ
Painting competition at Amrutha Varshini Vidyalaya
ಲೋಕದರ್ಶನ ವರದಿ
ರಾಣಿಬೆನ್ನೂರ 27 : ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ಏಕಾಗ್ರತೆ ಹಾಗೂ ಸಾಮಾಜಿಕ ಜಾಗೃತಿಯನ್ನು ಬೆಳೆಸುವ ಉದ್ದೇಶದಿಂದ ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಅಮೃತ ವರ್ಷಿಣಿ ವಿದ್ಯಾಲಯದಲ್ಲಿ ಗುರುವಾರ ಚಿತ್ರಕಲೆ ಹಾಗೂ ಬಣ್ಣ ಹಚ್ಚುವ ಸ್ಪರ್ಧೆ ನಡೆಯಿತು.
4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಕನಸಿನ ಮನೆ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಕಾಳಜಿ ವಿಷಯಗಳನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಕಲ್ಪನಾ ಶಕ್ತಿ ಹಾಗೂ ಕಲಾತ್ಮಕ ಪ್ರತಿಭೆಯನ್ನು ಚಿತ್ರಗಳ ಮೂಲಕ ಅನಾವರಣಗೊಳಿಸಿದರು.
ಕಿರಿಯ ವಿದ್ಯಾರ್ಥಿಗಳು ಕನಸಿನ ಮನೆಯ ಚಿತ್ರಗಳನ್ನು ಬಿಡಿಸಿದರೆ, ಹಿರಿಯ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ನಿಯಂತ್ರಣ, ಭೂಮಿಯ ರಕ್ಷಣೆ ಮತ್ತು ಸಾಮಾಜಿಕ ಕಳಕಳಿಗೆ ಸಂಬಂಧಿಸಿದ ಚಿತ್ರಗಳನ್ನು ರಚಿಸಿ ಗಮನ ಸೆಳೆದರು. ಕೆಲ ವಿದ್ಯಾರ್ಥಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಸಮಾನತೆ, ಸಹಕಾರ ಹಾಗೂ ಶಿಕ್ಷಣದ ಮಹತ್ವವನ್ನು ತಮ್ಮ ಚಿತ್ರಗಳಲ್ಲಿ ಪರಿಣಾಮಕಾರಿಯಾಗಿ ಮೂಡಿಸಿದರು.
ಇಂತಹ ಸ್ಪರ್ಧೆಗಳು ಮಕ್ಕಳ ಕೈಚಳಕವನ್ನು ವೃದ್ಧಿಸುವುದರ ಜತೆಗೆ ಏಕಾಗ್ರತೆ ಹೆಚ್ಚಿಸಲು, ಒತ್ತಡ ನಿವಾರಣೆಗೆ ಹಾಗೂ ಸೌಂದರ್ಯ ಪ್ರಜ್ಞೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಮುಖ್ಯಶಿಕ್ಷಕ ಪಿ.ಕೆ. ಪ್ರಕಾಶರಾವ್ ಹೇಳಿದರು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 