ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಚ್.ಎ. ಕದ್ರಾಪೂರಕರ್ ಅವರ ಸೇವೆ ಶ್ಲಾಘನೀಯ: ಶಾಸಕ ವಿಶ್ವಾಸ ವೈದ್ಯ
Panchayat Raj Engineering Sub-Division's H.A. Kadrapurkar's service is commendable: MLA Vishwas Vaid
ಸವದತ್ತಿ 07 : ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇದೀಗ ಸೇವೆಯಿಂದ ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಇಇ ಎಚ್.ಎ. ಕದ್ರಾಪೂರಕರ ಅವರನ್ನು ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಸದಾ ನಗುಮುಖದಿಂದ ಜನರನ್ನು ಮಾತನಾಡಿಸುತ್ತಿದ್ದ ಸ್ನೇಹಪರ ಅಧಿಕಾರಿ. ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಸಮರ್ಥವಾಗಿ ನಿಭಾಯಿಸಿದ್ದಾರೆ.
ಅವರ ಸಮಾಜಮುಖಿ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ, ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ನಿವೃತ್ತಿಯ ನಂತರದ ದಿನಗಳನ್ನು ಆರೋಗ್ಯಪೂರ್ಣವಾಗಿ ಕಳೆಯಲಿ. ತಾಯಿ ಯಲ್ಲಮ್ಮದೇವಿ ಅವರ ಮೇಲೆ ಸದಾ ಕೃಪೆ ಇರಲಿ ಮತ್ತು ಅವರು ಮುಂದಿನ ದಿನಗಳಲ್ಲಿ ಸುಖ, ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಹಾರೈಸುತ್ತೇನೆ, ಎಂದು ಹೇಳಿದರು. ಈ ಸಂದರ್ಭದಲ್ಲಿ ಯಲ್ಲಪ್ಪ ಗೋರವನಕೊಳ್ಳ, ಗೀರೀಶ್ ಮುನವಳ್ಳಿ, ಶಿವಕುಮಾರ್ ರಾಠೋಡ್, ಮಲ್ಲು ಜಕಾತಿ, ಬಸವರಾಜ ಅರಮನಿ, ಸುರೇಶ ತುಪ್ಪದ, ಹಾಗೂ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 