ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ನ್ಯಾಯಾಧೀಶ ಸಿದ್ಧಲಿಂಗ ಪ್ರಭು
Para-legal volunteers must become the voice of those deprived of justice: Judge Siddalinga Prabhu
ಲೋಕದರ್ಶನ ವರದಿ
ಬಳ್ಳಾರಿ, ಆ.20: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ನೆರವು ತಲುಪಿಸುವ ನಿಟ್ಟಿನಲ್ಲಿ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿದ್ಧಲಿಂಗ ಪ್ರಭು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಬಳ್ಳಾರಿ ಜಿಲ್ಲೆಯ ಪ್ಯಾರಾ ಲೀಗಲ್ ಸ್ವಯಂಸೇವಕರ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ. ಈ ಕಾರ್ಯದಲ್ಲಿ ಪ್ಯಾರಾ ಲೀಗಲ್ ಸ್ವಯಂಸೇವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಬಡವರು, ನಿರ್ಗತಿಕರು ಹಾಗೂ ಅಸಹಾಯಕರ ಪರವಾಗಿ ನಿಂತು ಅವರಿಗೆ ಸೂಕ್ತ ಕಾನೂನು ನೆರವು ದೊರಕಿಸುವುದು ಸ್ವಯಂಸೇವಕರ ಜವಾಬ್ದಾರಿ. ಸಹಾಯಕ್ಕಾಗಿ ಬರುವವರಿಗೆ ಯಾವುದೇ ಕಾರಣಕ್ಕೂ ಸುಳ್ಳು ಅಥವಾ ತಪ್ಪು ಭರವಸೆ ನೀಡದೆ, ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಪ್ರಾಧಿಕಾರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಸಂತ್ರಸ್ತರು ಮತ್ತು ದುರ್ಬಲ ವರ್ಗದವರು ಹಂಚಿಕೊಳ್ಳುವ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಬೇಕು. ಸ್ವಯಂಸೇವಕರು ಸ್ವಚ್ಛ ನಡೆ-ನುಡಿ ಹಾಗೂ ಸ್ಪಷ್ಟ ಸಂವಹನದಂತಹ ಮೌಲ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಕಾನೂನು ನಿರಂತರವಾಗಿ ಬದಲಾಗುತ್ತಿರುವುದರಿಂದ ಹೊಸ ಕಾಯ್ದೆಗಳು ಹಾಗೂ ತಿದ್ದುಪಡಿಗಳ ಕುರಿತು ಸ್ವಯಂಸೇವಕರು ಸದಾ ಜಾಗೃತರಾಗಿರಬೇಕು. ತರಬೇತಿಗಳ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜಮುಖಿ ಸೇವೆಗೆ ಸಜ್ಜಾಗಬೇಕು ಎಂದು ಸಿದ್ಧಲಿಂಗ ಪ್ರಭು ತಿಳಿಸಿದರು.
ಕಾರ್ಯಕ್ರಮದಲ್ಲಿ ತರಬೇತುದಾರ ಎಚ್. ವೆಂಕಟೇಶ್ ತರಬೇತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಕೀಲರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪ್ಯಾರಾ ಲೀಗಲ್ ಸ್ವಯಂಸೇವಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 