ಹೂವಿನ ಹಡಗಲಿ

ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಪೋಷಕರ ಪಾತ್ರ ಮುಖ್ಯ

ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಪೋಷಕರ ಪಾತ್ರ ಮುಖ್ಯ

ಹೂವಿನ ಹಡಗಲಿ 13: ಮಕ್ಕಳಿಗೆ ಜನ್ಮ ನೀಡಿ ಬೆಳೆಸುವುದರ ಜೊತೆಗೆ ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಹೆತ್ತವರ ಋಣ ತೀರಿಸಬೇಕು. ಅಲ್ಲದೇ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಸಬೇಕು ಎಂದು ಸಾಹಿತಿ ಇಸ್ಮಾಯಿಲ್ ಯಲಿಗಾರ್ ಅಭಿಪ್ರಾಯಪಟ್ಟರು.  ತಾಲೂಕಿನ ಹೊಳಲು ಗ್ರಾಮದ ಸಾಧನಾ ಸಿಬಿಎಸ್ಸಿ ಶಾಲೆಯಲ್ಲಿ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ್ದ ಪ್ರೇರಣಾ ವಿಚಾರ ಸಂಕಿರಣದಲ್ಲಿ ಶಾಲಾ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಕುರಿತು ಅವರು ಮಾತನಾಡಿದರು.  

ಬಹುತೇಕ ವಿಜ್ಞಾನಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಸಮಾಜ ಸುಧಾರಕರು ತಮ್ಮ ತಾಯ್ನಾಡಿನ ಮಾತೃಭಾಷೆಯಲ್ಲಿ ಶಿಕ್ಷಣ ಪಡೆದು ಸಾಧಕರಾಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಹೆಚ್ಚು ಓದಿ ಜ್ಞಾನವನ್ನು ಸಂಪಾದಿಸಿ ಕನ್ನಡ ತಾಯಿಯ ಸೇವೆ ಮಾಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೋಟೆಪ್ಪ ಬಿ., ಪ್ರಾಂಶುಪಾಲ ಪ್ರಶಾಂತ್ಗೌಡ ಬಿ., ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು. 


ಸುದ್ದಿ ಓದಿ