ಪರಿಷತ್ ಚುನಾವಣೆ ಫಲಿತಾಂಶ, ರಾಜ್ಯದ ಜನತೆಯ ಮಧ್ಯಂತರ ತೀರ್ಾಗಿದೆ: ಬೊಮ್ಮಾಯಿ
ಲೋಕದರ್ಶನ ವರದಿ
ಶಿಗ್ಗಾವಿ 29 : ಪಶ್ಚಿಮ ಪದವೀಧರರ ಕ್ಷೇತ್ರ ಸೇರಿದಂತೆ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಿದ್ದು ರಾಜ್ಯ ಸರ್ಕಾರದ ಜನವಿರೋಧಿ ಆಡಳಿತಕ್ಕೆ ತಕ್ಕ ಉತ್ತರ ನೀಡಿದ್ದು, ಇದು ರಾಜ್ಯದ ಜನತೆಯ ಮಧ್ಯಂತರ ತೀರ್ಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ವಿ. ಸಂಕನೂರು ಜಯ ಗಳಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಂಡು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 19 ಜಿಲ್ಲೆಗಳು ಮತ್ತು ಬೆಂಗಳೂರು ಮಹಾನಗರ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ನಡೆದ ಈ ಚುನಾವಣೆ ಫಲಿತಾಂಶವು ಕರ್ನಾಟಕದ ಜನತೆಯ ಮಧ್ಯಂತರ ತೀರ್ಾಗಿದೆ.
ಈ ಫಲಿತಾಂಶ ಭ್ರಷ್ಟ ಜನ ವಿರೋಧಿ ಸರ್ಕಾರವನ್ನು ಕಿತ್ತೊಗೆದು, ಜನಪರ ಸರ್ಕಾರ ಬರಬೇಕೆನ್ನುವುದು ಸ್ಪಷ್ಡ ಸಂದೇಶ ಇದೆ. ಹೀಗಾಗಿ ಇದು ರಾಜಕೀಯವಾಗಿ ಬಹಳ ಮಹತ್ವ ಪಡೆದಿದೆ ಎಂದು ಹೇಳಿದರು.ಇವಿಎಂ ಹಾಗೂ ಬ್ಯಾಲೆಟ್ ಪೇಪರ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ.
ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಎನ್ನುವ ಅವರು, ವಿರೋಧ ಪಕ್ಷಗಳು ಅಥವಾ ಬಿಜೆಪಿ ಗೆದ್ದಾಗ ಇವಿಎಂ ಹ್ಯಾಕ್ ಮಾಡುತ್ತಾರೆ ಎಂದು ಸುಳ್ಳು ಆರೋಪ ಮಾಡುತ್ತಾರೆ ಎಂದು ಟೀಕಿಸಿದ್ದಾರೆ. ಮುಂಬರುವ ಚುನಾವಣೆಗೆ ಈ ಚುನಾವಣೆಯು ದಿಕ್ಸೂಚಿಯಾಗಿದೆ ಎಂದು ವಿಪಕ್ಷಗಳು ಹೇಳಿದ್ದವು, ಆದರೆ ಈಗ ದಿಕ್ಸೂಚಿ ಏನು ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.??