ವಿಜಯಪುರ

ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಬಿಡುಗಡೆ

ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಬಿಡುಗಡೆ

ಲೋಕದರ್ಶನ ವರದಿ 

              ವಿಜಯಪುರ 26: ಜಿಲ್ಲೆಯ ಪದವಿ ಪೂರ್ವ ಕಾಲೇಜು ಜೀವಶಾಸ್ತ್ರ ವೇದಿಕೆಯ ವತಿಯಿಂದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಪಾಸಿಂಗ್ ಪ್ಯಾಕೇಜ್ ಅನ್ನು ಉಪನಿರ್ದೇಶಕರಾದ ಕೆ. ಎ. ಉಪ್ಪಾರ ಅವರು ನವೆಂಬರ 25 ಬಿಡುಗಡೆಗೊಳಿಸಿ, ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿ ಪಾಸಿಂಗ್ ಪ್ಯಾಕೇಜ್ ಅನ್ನು ಎಲ್ಲ ವಿದ್ಯಾರ್ಥಿಗಳಿಗೆ ತಲುಪಿಸಿ ಜಿಲ್ಲೆಯ ಫಲಿತಾಂಶ ಉತ್ತಮಪಡಿಸಲು ನಿರ್ದೇಶನ ನೀಡಿದರು.  

               ಈ ಸಂದರ್ಭದಲ್ಲಿ ಜೀವಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ಶ್ರೀ ಎಂ. ಎಸ್‌. ಬಿರಾದಾರ ಅವರು ಮಾತನಾಡಿ ಪಾಸಿಂಗ್ ಪ್ಯಾಕೇಜ್ ಅನ್ನು ತಯಾರಿಸಲು ಸಹಕರಿಸಿದ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಿಗೆ ಧನ್ಯವಾದಗಳನ್ನು ತಿಳಿಸಿದರು. ಕಾರ್ಯದರ್ಶಿಗಳಾದ ಶ್ರೀ ಎ. ಬಿ. ಬಿರಾದಾರ ಮತ್ತು ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳ ಜೀವಶಾಸ್ತ್ರ ಉಪನ್ಯಾಸಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ