ಗುಟ್ಕಾ ನಿಷೇಧ ಹಿಂಪಡೆಯದಂತೆ ಪಾಸ್ಟರ್ ಫ್ರಾನ್ಸಿಸ್ ಕಣ್ಣಯ್ಯ ಆಗ್ರಹ
Pastor Francis Kannayya urges against lifting the gutka ban
ಗದಗ 18: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕ ತಂಬಾಕು ಉತ್ಪನ್ನಗಳ ಮೇಲಿನ ನಿಷೇಧವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಪಾಸ್ಟರ್ ಫ್ರಾನ್ಸಿಸ್ ಕಣ್ಣಯ್ಯ ಆಗ್ರಹಿಸಿದ್ದಾರೆ.
ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿರುವ ಅವರು, ಯುವಜನತೆ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಸರ್ಕಾರದಷ್ಟೇ ಅಲ್ಲದೆ ಸಮಾಜದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಹೇಳಿದ್ದಾರೆ.
ಗುಟ್ಕಾ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಮತ್ತು ಅವುಗಳಿಂದ ಕುಟುಂಬಗಳು ಅನುಭವಿಸುವ ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಗಳನ್ನು ಪರಿಗಣಿಸಿ, ನಿಷೇಧವನ್ನು ಮುಂದುವರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಎಲ್ಲರೂ ಒಂದಾಗಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ದೃಷ್ಟಿಯಿಂದ ಇಂತಹ ನಿರ್ಧಾರಗಳನ್ನು ಬೆಂಬಲಿಸಬೇಕು,” ಎಂದು ಅವರು ತಿಳಿಸಿದ್ದಾರೆ.
ಮದ್ಯಪಾನ, ಧೂಮಪಾನ ಮತ್ತು ಗುಟ್ಕಾದಂತಹ ವ್ಯಸನಕಾರಿ ಉತ್ಪನ್ನಗಳಿಂದ ಸಮಾಜವನ್ನು ಮುಕ್ತಗೊಳಿಸುವ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಬೇಕು. ಸ್ವಚ್ಛ ಭಾರತ ಎಂದರೆ ಕೇವಲ ಪರಿಸರ ಸ್ವಚ್ಛತೆಯಲ್ಲ; ಆರೋಗ್ಯಕರ ಹಾಗೂ ವ್ಯಸನಮುಕ್ತ ಭಾರತ ನಿರ್ಮಾಣವೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮುಂದಿನ ಪೀಳಿಗೆಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೈಗೊಳ್ಳುವ ಸಾರ್ವಜನಿಕ ಆರೋಗ್ಯಪರ ಕ್ರಮಗಳಿಗೆ ಮಠಾಧೀಶರು, ಧಾರ್ಮಿಕ ಮುಖಂಡರು, ಸಾಮಾಜಿಕ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಬೆಂಬಲ ನೀಡಬೇಕು ಎಂದು ಪಾಸ್ಟರ್ ಫ್ರಾನ್ಸಿಸ್ ಕಣ್ಣಯ್ಯ ಕರೆ ನೀಡಿದ್ದಾರೆ.
“ವ್ಯಾಪಾರಕ್ಕಿಂತ ಆರೋಗ್ಯ, ಲಾಭಕ್ಕಿಂತ ಜೀವ ಮತ್ತು ರಾಜಕೀಯ ಹಿತಾಸಕ್ತಿಗಿಂತ ಸಾರ್ವಜನಿಕರ ಹಿತವೇ ಮುಖ್ಯ” ಎಂಬ ಮನೋಭಾವ ಸಮಾಜದಲ್ಲಿ ಬೆಳೆಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಪಾಸ್ಟರ್ ಫ್ರಾನ್ಸಿಸ್ ಕಣ್ಣಯ್ಯ ಅವರು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 