ಪಟೇಲ್ ರಿಂದ ಭುವನೇಶ್ವರಿ ವೃತ್ತದ ಉದ್ಘಾಟನೆ
Patel inaugurates Bhuvaneshwari Circle
ಪಟೇಲ್ ರಿಂದ ಭುವನೇಶ್ವರಿ ವೃತ್ತದ ಉದ್ಘಾಟನೆ
ಕೊಪ್ಪಳ 02: ನಗರದ ಮೂರನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಹಮಾಲರ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಭುವನೇಶ್ವರಿ ವೃತ್ತದ ಉದ್ಘಾಟನೆ ಯನ್ನು ಶನಿವಾರದಂದು ಕರ್ನಾಟಕ ರಾಜ್ಯೋತ್ಸವದ ದಿನಾಚರಣೆ ದಿನದಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಉದ್ಘಾಟನೆ ನೆರವೇರಿಸಿ ಲೋಕಾರೆ್ಣ ಮಾಡಿದರು,ನಂತರ ಸರಳ ಸಾಂಕೇತಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಯಿ ಭುವನೇಶ್ವರಿ ನಮ್ಮೆಲ್ಲರನ್ನು ಕಾಪಾಡಲಿ, ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸುವಂತೆ ಆಶೀರ್ವದಿಸಲಿ, ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆ ಕನ್ನಡ ಮಾತನಾಡಲಿ ,ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವಂತಾಗಲಿ, ಎಲ್ಲರೂ ಸೇರಿ ಕನ್ನಡಾಂಬೆ ತಾಯಿಯ ಹೆಮ್ಮೆಯ ಪುತ್ರರಂತೆ ಕನ್ನಡ ಭಾಷೆ ,ನಮ್ಮ ನಾಡಿನ ನೆಲ, ಜಲ ,ಇಲ್ಲಿಯ ಪರಂಪರೆ, ನಮ್ಮ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗುವದರ ಜೊತೆಗೆ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸಮಗ್ರ ಮಾಹಿತಿ ಮತ್ತು ಪರಿಚಯಿಸುವಂಥ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು, ಈ ಸಂದರ್ಭದಲ್ಲಿ ಹಮಾಲರ ಕಾಲೋನಿಯ ಹಿರಿಯ ಸಾರ್ವಜನಿಕರು, ಸಮಾಜ ಬಾಂಧವರು, ಯುವ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 