ನಾಡೋಜ ಪಾಟೀಲ ಪುಟ್ಟಪ್ಪ ಪ್ರತಿಮೆಗೆ ಗೌರವ ನಮನ
ಲೋಕದರ್ಶನ ವರದಿ
ಹುಬ್ಬಳ್ಳಿ ೨೪ : ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೭ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕ.ವಿ.ವ ಸಂಘದ ಆವರಣದಲ್ಲಿರುವ ಕನ್ನಡದ ಕಟ್ಟಾಳು ಆಗಿ ದುಡಿದ ನಾಡೋಜ ಡಾ|| ಪಾಟೀಲ ಪುಟ್ಟಪ್ಪ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಎನ್.ಎಸ್.ಕಾಶಪ್ಪನವರ, ರಾಜೇಶ್ ಕೋರಿ, ಮುಂತಾದವರು ಇದ್ದರು. ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ನಾಡು ನುಡಿಗೆ ನಾಡೋಜ ಡಾ|| ಪಾಟೀಲ ಪುಟ್ಟಪ್ಪ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ನಾಡು, ನುಡಿ, ಗಡಿ, ಜಲ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಶ್ರಮಿಸಿದವರು, ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಅರ್ದಶತಮಾನ ಅಧ್ಯಕ್ಷರಾಗಿ ಮುನ್ನೇಡಿಸಿದವರು ನಾಡೋಜ ಡಾ|| ಪಾಟೀಲ ಪುಟ್ಟಪ್ಪ. ಧಿಮಂತ ಪತ್ರಕರ್ತರಾಗಿ ಪ್ರಪಂಚ ಪತ್ರಿಕೆಯ ಮೂಲಕ ನಾಡಿನದುದ್ದಕ್ಕೂ ಪ್ರಸಿದ್ದಿ ಪಡೆದಿದ್ದರು ಎಂದರು.