ಗಣೇಶೋತ್ಸವ ಹಿನ್ನೆಲೆಯಲ್ಲಿ ಹಿರಿಯರ ಶಾಂತಿ ಸಮಿತಿ ಸಭೆ
Peace committee meeting of elders ahead of Ganeshotsava
ಘಟಪ್ರಭಾ, ಸೆ. 8: ಪ್ರತಿವರ್ಷದಂತೆ ಈ ವರ್ಷವೂ ನಡೆಯಲಿರುವ ಶ್ರೀ ಗಣೇಶೋತ್ಸವದ ಅಂಗವಾಗಿ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಗ್ರಾಮಗಳ ಹಿರಿಯರ ಶಾಂತಿ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಘಟಪ್ರಭಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಚ್. ಡಿ. ಮುಲ್ಲಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಗ್ರಾಮಗಳ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು.
ಸಾರ್ವಜನಿಕರ ಪರವಾಗಿ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ಮಹಾಜನ, ಕುಮಾರ್ ಹುಕ್ಕೇರಿ ಪುಟ್ಟು (ವೀರಭದ್ರ) ಹಾಗೂ ಖಾನಾಪುರ ಮಾತನಾಡಿ, ಗಣೇಶೋತ್ಸವದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಸದಾ ಇರುತ್ತದೆ. ಅದೇ ರೀತಿ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ರೀತಿಯ ಅನುಕೂಲ ಹಾಗೂ ಭದ್ರತೆಯನ್ನು ಪೊಲೀಸ್ ಇಲಾಖೆ ಒದಗಿಸಬೇಕು ಎಂದು ಮನವಿ ಮಾಡಿದರು.
ಪೊಲೀಸ್ ಇನ್ಸ್ಪೆಕ್ಟರ್ ಎಚ್. ಡಿ. ಮುಲ್ಲಾ ಮಾತನಾಡಿ, ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರಿಗೆ ಕರೆ ನೀಡಿದರು. ವಯೋವೃದ್ಧರು, ನಾಗರಿಕರು, ಮಕ್ಕಳು ಹಾಗೂ ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲದೆ ವಾಹನ ಸಂಚಾರ, ಆಂಬುಲೆನ್ಸ್ ಹಾಗೂ ಸಾರ್ವಜನಿಕ ಸಾರಿಗೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಣೇಶೋತ್ಸವ ಆಚರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ರಾಮಣ್ಣ ಹುಕ್ಕೇರಿ, ಕಾಡಪ್ಪ ಕರೋಶಿ, ಮಾರುತಿ ದುಂಡಪ್ಪ ಹುಕ್ಕೇರಿ, ಶೆಟ್ಟಪ್ಪ ಗಾಡಿವಡ್ಡರ, ರೆಹಮಾನ್ ಮೊಕಾಶಿ, ಆಪಾಸಾಬ್ ಮುಲ್ಲಾ, ರಂಜಾನ್ ಖೋಜಾ, ಶಾಂತು ಕಟ್ಟೀಮನಿ, ಭರಮಣ್ಣ ಗಾಡಿವಡ್ಡರ ಸೇರಿದಂತೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 