ಗಣಪತಿ ಹಬ್ಬದ ಪ್ರಯುಕ್ತ ಶಾಂತಿ ಸಭೆ
Peace meeting ahead of the Ganapathi festival
ಲೋಕದರ್ಶನ ವರದಿ
ಯಮಕನಮರಡಿ 04 : ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಗಣಪತಿ ಮಂಡಳಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯನ್ನು ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಪಿಎಸ್‌ಐ ಪಾಟೀಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಠಾಣೆಯ ಸಿಪಿಐ ಅವರು, ಗಣಪತಿ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಗಣಪತಿ ಮಂಟಪಗಳಲ್ಲಿ ಯಾವುದೇ ರೀತಿಯ ಅಶ್ಲೀಲ ಹಾಡುಗಳನ್ನು ಹಾಕಬಾರದು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಗಣಪತಿ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮಂಟಪಗಳ ಸುತ್ತಮುತ್ತ ಜೂಜಾಟ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು.
ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಮಂಟಪಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಗಣಪತಿ ಮಂಡಳಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 