ಮೊಹರಂ ಹಬ್ಬದ ನಿಮಿತ್ತ ಶಾಂತಿ ಸಭೆ
Peace meeting on the occasion of Muharram festival
ಯಲಬುರ್ಗಾ 28: ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು’ ಎಂದು ಕಮಲನಗರ ಠಾಣೆ ವೃತ್ತ ನೀರೀಕ್ಷಕ ಮೌನೇಶ್ವರ ಮಾಲಿಪಾಟೀಲ್ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದಲ್ಲಿ ಹಬ್ಬಗಳು ಭಾವೈಕ್ಯತೆಯ ಸಂಕೇತವಾಗಿವೆ. ಎಲ್ಲರೂ ಸೇರಿ ಸಮಸ್ಯೆಯಾಗದಂತೆ ಹಬ್ಬ ಆಚರಿಸಬೇಕು’ ಎಂದರು. ನಂತರ ಪಿಎಸ್‌ಐ ವಿಜಯ ಪ್ರತಾಪ ಅವರು ಮಾತನಾಡಿ , ಪ್ರತಿವರ್ಷದಂತೆ ಈ ವರ್ಷವೂ ಸಹ ಮೊಹರಂ ಹಬ್ಬವನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಶಾಂತರೀತಿಯಲ್ಲಿ ಮೊಹರಂ ಆಚರಣೆ ಮಾಡುವಂತೆ ಜನತೆಗೆ ತಿಳಿಸಿದರು.
ಈ ವೇಳೆ ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಅಂದಾನಗೌಡ ಉಳ್ಳಾಗಡ್ಡಿ ,ಅತ್ತಾರಸಾಬ್ ಖಾಜಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಮೊಹರಂ ಹಬ್ಬವನ್ನು ಪ್ರತಿ ವರ್ಷ ಎಲ್ಲ ಸಮುದಾಯದವರು ಒಗ್ಗೂಡಿ ಅತಿ ವಿಜೃಂಬಣೆಯಿಂದ ಆಚರಣೆ ಮಾಡುತ್ತಾ ಬಂದಿದ್ದು ಈ ವರ್ಷವೂ ಕೂಡ ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ನೀಡದೆ ಶಾಂತ ರೀತಿಯಲ್ಲಿ ಅಚ್ಚು ಕಟ್ಟಾಗಿ ಹಬ್ಬ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಿಎಸ್‌ಐ ಗುಲಾಮ ಅಹ್ಮದ್ ಖಾಜಿ, ಪಪಂ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯ ಅಶೋಕ ಅರಕೇರಿ, ಹನುಮಂತ ಭಜಂತ್ರಿ, ಮುಖಂಡರಾದ ಈರ್ಪ ಬಣಕಾರ,. ಎಮ್ ಎನ್ ನದಾಫ್, ಯಲ್ಲಪ್ಪ ನಾಯಕ್, ಶಿವಾನಂದ ಬಣಕಾರ, ಮಲ್ಲಪ್ಪ ಹನಿಗಿ, ಸೇರಿ ಮತ್ತಿತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 