ನಾಳೆ ಶಾಂತಿಯುತ ಕರ್ನಾಟಕ ಬಂದ್: ಶಾಲಾ ಜನಸಾಮಾನ್ಯರಿಗೆ ಅಡ್ಡಿಯಿಲ್ಲ ಕಾಲೇಜುಗಳಗೆ,
ಬಳ್ಳಾರಿ : ಜೂ (20)ರಂದು ಪ್ರಸ್ತುತ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಹುಬ್ಬಳ್ಳಿಯ ಕನರ್ಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು 2023 ರ ಜೂನ್ 22 ರಂದು ನೀಡಿರುವ ಕರ್ನಾ ಟಕ ಬಂದ್ ಯಶಸ್ವಿಗೊಳಸಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ ನಿರ್ಧರಿಸಿದೆ.ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸಿ. ಶ್ರೀನಿವಾಸರಾವ್, ಗೌರವ ಕಾರ್ಯದರ್ಶಿ ಯಶವಂತ್ರಾಜ್ ನಾಗಿರೆಡ್ಡಿ ಅವರು ಜಂಟಿಯಾಗಿ ಮಾಹಿತಿ ನೀಡಿದರು, ನಗರದ ಕಛೇರಿಯಲ್ಲಿ ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು. ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯ ಸಭಾಭವನದಲ್ಲಿ ಸೋಮವಾರ ನಡೆದ ಬಳ್ಳಾರಿ ಜಿಲ್ಲಾ ರೈಸ್ಮಿಲ್ ಅಸೋಸಿಯೇಷನ್, ಕಾಟನ್ ಅಸೋಸಿಯೇಷನ್, ಇಂಡಸ್ಟ್ರಿಯಲ್ ಅಸೋಸಿಯೇಷನ್, ಸ್ಪಾಂಜ್ ಐರನ್ ಅಸೋಸಿಯೇಷನ್, ಗಾಮೆರ್ಂಟ್ಸ್ ಅಸೋಸಿಯೇಷನ್, ಕೋಲ್ಡ್ ಸ್ಟೋರೇಜ್ ಅಸೋಸಿಯೇಷನ್, ಎಪಿಎಂಸಿ ಮರ್ಚಿಟ್ಸ್ ಅಸೋಸಿಯೇಷನ್ ಸೇರಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಶಾಂತಿಯುತ ಬಂದ್ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕರ್ನಾಟಕದ ಬಂದ್ ಬಳ್ಳಾರಿಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವ್ಯಾಪಾರ, ವಾಣಿಜ್ಯೋದ್ಯಮಗಳು ಮತ್ತು ಕೈಗಾರಿಕೆಗಳು ಚಟುವಟಿಕೆಗಳನ್ನು ನಿಲ್ಲಿಸುವ ಮೂಲಕ ಬಂದ್ ಆಚರಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಸಲು ನಿರ್ಧರಿಸಿವೆ.ಶಾಲಾ ಕಾಲೇಜುಗಳು, ಸಾರ್ವಜನಿಕ ಸಾರಿಗೆ, ಆರೋಗ್ಯ ಸೇರಿ ನಾಗರಿಕರ ಜನಜೀವನ ಸಾಮಾನ್ಯವಾಗಿರುತ್ತದೆ. ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸಭೆ ಸೇರುವ ಪ್ರತಿಭಟನಾಕಾರರು ಬೆಂಗಳೂರು ರಸ್ತೆ, ತೇರುಬೀದಿ ಮೂಲಕ ಎಚ್ಆರ್ಜಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯನ್ನು ತಲುಪಿ ಜಿಲ್ಲಾಡಳಿತಕ್ಕೆ ಪ್ರತಿಭಟನಾ ಮನವಿ ಪತ್ರ ಸಲ್ಲಿಸುವ ಮೂಲಕ ಸಮಾರೋಪಗೊಳ್ಳಅದೆ.ಕರ್ನಾಟಕ ಬಂದ್ನಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯಲ್ಲಿ ನೋಂದಣಿಯಾಗಿರುವ ಸಂಘಗಳ ಜೊತೆಯಲ್ಲಿ ನಾಗರೀಕರ ಹಿತಾಸಕ್ತಿ ಕಾಪಾಡುವ ಸಂಘ ಸಂಸ್ಥೆಗಳನ್ನು, ಸಾರ್ವಜನಿಕರನ್ನು ಆಹ್ವಾನಿಸಲಾಗುತ್ತದೆ. ವಿದ್ಯುತ್ ಶುಲ್ಕ ಹೆಚ್ಚಳದ ಬಾಧಿಸಲು ಪಾಲ್ಗೊಳ್ಳಲು ಮುಕ್ತ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಬಿ.ಮಹಾರುದ್ರಗೌಡ, ಎ.ಮಂಜುನಾಥ, .ಕೆ.ರಮೇಶ್ ಬುಜ್ಜಿ, ಕೆ.ಸುರೇಶ್ ಬಾಬು, ಜಂಟಿಕಾರ್ಯದಶರ್ಿಗಳಾದ ಎಸ್.ದೊಡ್ಡನಗೌಡ, ಸೊಂತ್ ಗಿರಿಧರ್, ನಾಗರಾಜ, ರಾಮಚಂದ್ರರಾಯ, ಶ್ರೀನಿವಾಸ್, ವಿನಯ, ಹಾಗೂ ವಿವಿಧ ಕಮಿಟಿ ಚೇರ್ಮನಗಳು, ಕಾರ್ಯಕರಿ ಸಮಿತಿ ಸದಸ್ಯರು, ವಿವಿಧ ಸಂಘ/ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು