ಮುದ್ದೆಬಿಹಾಲ್

ಅಲ್ಪ ಮಳೆಗೆ ರಸ್ತೆಯಲ್ಲಿ ರಸ್ತೆ ಪಾದಚಾರಿಗಳು; ಸಾರ್ವಜನಿಕರ ಪರದಾಟ

ಅಲ್ಪ ಮಳೆಗೆ ರಸ್ತೆಯಲ್ಲಿ ರಸ್ತೆ ಪಾದಚಾರಿಗಳು; ಸಾರ್ವಜನಿಕರ ಪರದಾಟ

ಮುದ್ದೇಬಿಹಾಳ, ಜು. 6: ಅಲ್ಪ ಪ್ರಮಾಣದ ಮಳೆಯಲ್ಲೇ ಪಟ್ಟಣದ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆಸರಿನ ವಾತಾವರಣ ನಿರ್ಮಾಣವಾಗುತ್ತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಿದ್ದರೂ, ಸಮರ​‍್ಕ ಮಳೆನೀರು ಹರಿವಿನ ವ್ಯವಸ್ಥೆಯ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ. ಅಲ್ಪ ಪ್ರಮಾಣದ ಮಳೆಯಾದರೂ ರಸ್ತೆಗಳಲ್ಲಿ ನೀರು ನಿಂತು ಕೆಸರು ಆವರಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚಾರಕ್ಕೆ ಹರಸಾಹಸಪಡುತ್ತಿದ್ದಾರೆ.  

ಪಟ್ಟಣದ ರಾಣಿ ಚೆನ್ನಮ್ಮ ಮಹಾದ್ವಾರದ ಎದುರಿನ ರಸ್ತೆಯಲ್ಲಿ ಮಳೆನೀರು ನಿಂತಿರುವುದರಿಂದ ಸಾರ್ವಜನಿಕರು ಕೆಸರಿನಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಸಮರ​‍್ಕ ಚರಂಡಿ ಹಾಗೂ ನೀರು ಹರಿವಿನ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ಮಳೆಯ ಸಂದರ್ಭದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. 


ಸುದ್ದಿ ಓದಿ