ಪ್ರಜಾಸೇವಾ ಆಂದೋಲನಕ್ಕೆ ಸಮಸ್ಯೆಗಳ ಹೊತ್ತು ತಂದ ಜನತೆ

ಪ್ರಜಾಸೇವಾ ಆಂದೋಲನಕ್ಕೆ ಸಮಸ್ಯೆಗಳ ಹೊತ್ತು ತಂದ ಜನತೆ  People bringing their issues to the public service movement


ಲಕ್ಷ್ಮೇಶ್ವರ, ಸೆ.20: ತಾಲೂಕಿನ ಸೂರಣಗಿ ಹೋಬಳಿ ಮಟ್ಟದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಶಾಸಕರ ಗಮನಕ್ಕೆ ತಂದರು.  

ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಸೌಲಭ್ಯಗಳು ಹಾಗೂ ಸೇವೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.  

ಈ ಸಂದರ್ಭದಲ್ಲಿ ತಹಶೀಲ್ದಾರ್ ಧನಂಜಯ ಎಂ. ಮಾಳಗಿತ್ತಿ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸೂರಣಗಿ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.