ಹೊಸಪೇಟೆ

ಜನರಿಗೂ ಸಹ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಇರಬೇಕು: ನೊಂಗ್ಜಾಯ್ ಮೊಹಮ್ಮದ್

ಜನರಿಗೂ ಸಹ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಇರಬೇಕು: ನೊಂಗ್ಜಾಯ್ ಮೊಹಮ್ಮದ್

ಹೊಸಪೇಟೆ,26: ಸರ್ಕಾರಗಳು ಜನಸಂಖ್ಯಾ ನಿಯಂತ್ರಣ ಅನೇಕ ಕಾರ್ಯಕ್ರಮಗಳು ಹಮ್ಮಿಕೊಂಡು ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದು, ಜನರಿಗೂ ಸಹ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಇರಬೇಕಾಗುತ್ತದೆ ಎಂದು ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ  ಎಂದರು. 

ಇಂದು ಹೊಸಪೇಟೆಯ ತಾಲೂಕು ಪಂಚಾಯತ್ ನ ವಿದ್ಯಾರಣ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ,  ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ಜಿಲ್ಲಾ ವತಿಯಿಂದ ಅಯೋಜಿಸಲಾದ ವಿಶ್ವ ಜನಸಂಖ್ಯಾ ದಿನಾಚರಣೆ- 2024  ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್‌.ಎನ್‌. ಮೊಹಮ್ಮದ್ ಇಮಾಮ್ ನಿಯಾಜಿ ರವರು ಅತಿಥಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ  ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ನಂತರ ಮಾತನಾಡಿ  

ನಂತರ ಕಾರ್ಯಕ್ರಮ ವನ್ನುದ್ದೇಶಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಇಮಾಮ್ ನಿಯಾಜಿ ರವರು ಮಾತನಾಡಿ ಇಡೀ ವಿಶ್ವದಲ್ಲಿ 800 ಕೋಟಿಗೂ ಅಧಿಕ ಜನಸಂಖ್ಯೆ ಇದ್ದು, ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದಲ್ಲೇ ಮೊದಲೇ ಸ್ಥಾನದಲ್ಲಿ ಇದೆ, ಜನಸಂಖ್ಯೆ ಯನ್ನು ನಾವುಗಳು ನಿಯಂತ್ರಣ ಮಾಡದೇ ಇದ್ದರೇ ಆಹಾರ, ವಸತಿ ಉದ್ಯೋಗದ ಸಮಸ್ಯೆಗಳು ಸೃಷ್ಟಿಯಾಗುತ್ತವೆ, ಸರ್ಕಾರಗಳು ಸಹ ವಿವಿಧ ಕಾರ್ಯಕ್ರಮಗಳ ಮೂಲಕ ಜನ ನಿಯಂತ್ರಣ ಕಾರ್ಯಕ್ರಮ ಮಾಡುತ್ತಿವೆ ಜನರು ಸಹ ಸಹಕರಿಸಿ ಯೋಜನೆಗಳು ಯಶಸ್ವಿಗೊಳಿಸಬೇಕು, 

ನಂತರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶಂಕರ್ ನಾಯ್ಕ್‌  ಮಾತನಾಡಿ  ಇದೇ ತಿಂಗಳು 17 ರಿಂದ 27 ರವರೆಗೆ ಜನಸಂಖ್ಯಾ ನಿಯಂತ್ರಣ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು,  ಅಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರದೊಂದಿಗೆ ಅಭಿಯಾನವನ್ನು ಹಮ್ಮಿಕೊಂಡಿದ್ದು ಜನರ ಜಾಗೃತಿ ಮೂಡಿಸಲಾಗುತ್ತದೆ ಎಂದರು. 

 ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ವಿನಯ, ಅನುಷ್ಟಾನ ಅಧಿಕಾರಿಗಳಾದ ಜಂಭಯ್ಯ , ತಾಲುಕು ಆರೋಗ್ಯಾಧಿಕಾರಿಗಳಾದ  ಡಾ. ಬಸವರಾಜ್, ಆರೋಗ್ಯ ಇಲಾಖಾ ಅಧಿಕಾರಿಗಳಾದ ದೊಡ್ಮನಿ, ಸಿಬ್ಬಂದಿಗಳು ಮತ್ತು ಅಶಾ ಕಾರ್ಯಕರ್ತರು ಉಪಸ್ಥಿತರಿದ್ದರು. 

ಈ ಕಾರ್ಯಕ್ರಮದಲ್ಲಿ ತಾಲೂಕು, ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಡಾ. ನಾಗರಾಜ್, ಡಾ. ಶಿವರಾಜ್, ಡಾ.ಗುರುಪ್ರಸಾದ್, ಗಂಗಮ್ಮ, ಉಮಾಮಹೇಶ್ವರಿ ಇತರರಿಗೆ ಸನ್ಮಾನಿಸಿ ಪ್ರಶಸ್ತಿ ನೀಡಿ ಅಭಿನಂದಿಸಿದರು. 


ಸುದ್ದಿ ಓದಿ