ಮಹಲಿಂಗಪುರ

ರೈತರಿಗೆ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ

ರೈತರಿಗೆ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ

ಲೋಕದರ್ಶನ ವರದಿ 

   ಮಹಾಲಿಂಗಪುರ 05 : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ   ಆವರಣದಲ್ಲಿ ರೈತರು, ವ್ಯಾಪಾರಿಗಳು ಹಾಗೂ ಕಾರ್ಮಿಕರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 1 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಓವರ್ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಅವರು ಭೂಮಿಪೂಜೆ ನೆರವೇರಿಸಿದರು. ಹಲವು ವರ್ಷಗಳಿಂದ ಶಿಥಿಲಗೊಂಡಿದ್ದ ಹಳೆಯ ಓವರ್ಹೆಡ್ ಟ್ಯಾಂಕ್ ತೆರವುಗೊಳಿಸಿದ ಬಳಿಕ, ಅದೇ ಸ್ಥಳದಲ್ಲಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಎಪಿಎಂಸಿಗೆ ಆಗಮಿಸುವ ರೈತರು, ವ್ಯಾಪಾರಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ವರ್ಷಪೂರ್ತಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ.  ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ರೈತರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ನಮ್ಮ ಬದ್ಧತೆಯಾಗಿದ್ದು,  ಎಪಿಎಂಸಿ ಅಭಿವೃದ್ಧಿಗೆ ಇನ್ನಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಪಿಎಂಸಿ ಆಡಳಿತ ಮಂಡಳಿ ಅಧ್ಯಕ್ಷ ದೇವಲ ದೇಸಾಯಿ, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 


ಸುದ್ದಿ ಓದಿ