ಉಪ್ಪುನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿ ಲಕ್ಷ್ಮಿಪ್ರಿಯಾ ಸೂಚನೆ
Permanent solution to the saline water problem: DC Lakshmipriya's directive
ಲೋಕದರ್ಶನ ವರದಿ
ಕಾರವಾರ 26: ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಉಪ್ಪುನೀರಿನ ಸಮಸ್ಯೆಗೆ ಪರಿಹಾರ ಒದಗಿಸುವುದರ ಜತೆಗೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಕಾರವಾರ ತಾಲ್ಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಗಳಿಗೆ ಉಪ್ಪುನೀರು ನುಗ್ಗುತ್ತಿರುವುದು ಹಾಗೂ ಬಾವಿಗಳಲ್ಲಿ ಉಪ್ಪುನೀರು ಸೇರುತ್ತಿರುವ ಕುರಿತು ಗ್ರಾಮಸ್ಥರು ಸಲ್ಲಿಸಿದ ಮನವಿಗಳ ಬಗ್ಗೆ ಜಿಲ್ಲಾಧಿಕಾರಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಭಾಗದಲ್ಲಿ ಉಪ್ಪುನೀರಿನ ಸಮಸ್ಯೆ ತಡೆಗಟ್ಟಲು ಸಣ್ಣ ನೀರಾವರಿ ಇಲಾಖೆಯಿಂದ ಕಾರ್ಲ್ಯಂಡ್ ನಿರ್ಮಾಣಕ್ಕೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಯನ್ನು ಪರೀಶೀಲಿಸಿ ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಹೆಸ್ಕಾಂ ಇಲಾಖೆಗೆ ವಿದ್ಯುತ್ ಲೈನ್ಗಳ ದುರಸ್ತಿ, ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಅರಣ್ಯ ಇಲಾಖೆಗೆ ಅಪಾಯಕಾರಿಯಾಗಿರುವ ಮರಗಳನ್ನು ತೆರವುಗೊಳಿಸುವ ಕುರಿತು ಸಲ್ಲಿಕೆಯಾಗಿರುವ ದೂರುಗಳನ್ನು ಪರೀಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 40ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಎಲ್ಲ ದೂರುಗಳಿಗೂ ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಕಾರವಾರ ಉಪವಿಭಾಗಾಧಿಕಾರಿ ರಮ್ಯಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಏಣಗೌಡರ, ಡಿವೈಎಸ್ಪಿ ಗೀರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 