ಬಳ್ಳಾರಿ

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ಬಳ್ಳಾರಿ,ಜು.24: ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಿಪ್ಪಯ್ಯ(45) ಎಂಬ  ವ್ಯಕ್ತಿಯು ಜು.22ರಂದು ಕಾಣೆಯಾಗಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದುಠಾಣಾಧಿಕಾರಿಗಳು ತಿಳಿಸಿದ್ದಾರೆ. 

ಕಾಣೆಯಾದ ವ್ಯಕ್ತಿ ಸಾಧಾರಣ ಮೈಕಟ್ಟು, ಮೈಮೇಲೆ ಅರ್ಧ ತೋಳಿನ ಗುಲಾಬಿ ಬಣ್ಣದ ಅಂಗಿ, ನಸಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. 

ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಅವರ ಮೊ.9480803050 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ