ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ 26: ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 29 ವಯಸ್ಸಿನ ಸಂತೋಷ್ ಕುಮಾರ್ ಎಂಬ ವ್ಯಕ್ತಿ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.6 ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ಎಡ ಕಾಲು ಊತ ಇರುತ್ತದೆ. ನೀಲಿ ಬಣ್ಣದ ಹಳದಿ ಗೆರೆಗಳುಳ್ಳ ತುಂಬು ತೋಳಿನ ಅಂಗಿ ಮತ್ತು ಕ್ರೀಂ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.ಸಂ: 08392276461, 9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 08392258100 ಗೆ ಸಂಪರ್ಕಿಸಲು ಕೋರಲಾಗಿದೆ.