ಬಳ್ಳಾರಿ

ವ್ಯಕ್ತಿ ಕಾಣೆ ಪ್ರಕರಣ ದಾಖಲು

ವ್ಯಕ್ತಿ ಕಾಣೆ ಪ್ರಕರಣ ದಾಖಲು

ಬಳ್ಳಾರಿ 05: ಸಿರಿಗೇರಿ ಪೋಲೀಸ್ ಠಾಣೆ ವ್ಯಾಪ್ತಿಯ ಕರೂರು ಗ್ರಾಮದ ನಿವಾಸಿಯಾದ ಎ.ಮಹಮದ್ ರಫಿ ಎನ್ನುವ 31ವರ್ಷದ ವ್ಯಕ್ತಿ ಸೆ.24ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ, 5.4ಅಡಿ ಎತ್ತರ ಇದ್ದು, ಕನ್ನಡ, ಉರ್ದು ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. 

ಬ್ರೌನ್ ಮತ್ತು ನಸಿ ಬಣ್ಣದ ತುಂಬು ತೋಳಿನ ಚೆಕ್ಸ್‌ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್ ಧರಿಸಿರುತ್ತಾನೆ. 

ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರಿಗೇರಿ ಪೋಲೀಸ್ ಠಾಣೆಯ ದೂ.08396244426, ಮೊ.9480803056 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ.08392258100 ಗೆ ಸಂಪರ್ಕಿಸಬಹುದು. 


ಸುದ್ದಿ ಓದಿ