ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
Personal income tax collection has increased: Nirmala Sitharaman clarifies
ನವದೆಹಲಿ: ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ ಎಂದರೆ ದೇಶದಲ್ಲಿ ಮಧ್ಯಮ ವರ್ಗದವರನ್ನು ತುಳಿಯಲಾಗುತ್ತಿದೆ ಎಂದರ್ಥವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ. 2026-27ನೇ ಸಾಲನಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯುತ್ತಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಮಧ್ಯಮ ವರ್ಗ ವಿಸ್ತರಣೆಯ ಪುರಾವೆಗಳಿವೆ ಎಂದು ಹೇಳಿದರು.
ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳದಿಂದ ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯಲಾಗುತ್ತಿದೆ ಎಂಬರ್ಥವಲ್ಲ ಎಂದರು. ಸ್ವಾವಲಂಬಿ ಭಾರತ ನಿರ್ಮಾಣ ನಿಟ್ಟಿನಲ್ಲಿ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಜೆಟ್ ನಲ್ಲಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ರಾಜ್ಯಸಭೆ ಸದಸ್ಯರನ್ನು ಒತ್ತಾಯಿಸಿದರು.
ಹಲವಾರು ಕಲ್ಯಾಣ ಯೋಜನೆಗಳಲ್ಲಿ ವೆಚ್ಚ ಕಡಿತ ಮಾಡಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಯಾವುದೇ ಯೋಜನೆಗಳಲ್ಲಿ ರಾಜ್ಯಗಳಿಗೆ ಅನುದಾನವನ್ನು ನಿರಾಕರಿಸುವುದಿಲ್ಲ ಅಥವಾ ಸ್ಥಗಿತಗೊಳಿಸುವುದಿಲ್ಲ. ಯುಪಿಎ ಆಡಳಿತದಲ್ಲಿ 94,000 ಕೋಟಿ ರೂ.ಗೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ 14 ಸಾಮಾಜಿಕ ವಲಯದ ಯೋಜನೆಗಳಲ್ಲಿ ಕೇವಲ 37,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿಲ್ಲ ಎಂದು ಹೇಳಿದರು.
ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ ಸಚಿವರು, ಅನುದಾನ ಹಂಚಿಕೆ ಮಾಡದೆ ಯೋಜನೆಗಳನ್ನು ಘೋಷಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಗಳನ್ನು ತಳ್ಳಿಹಾಕಿದರು. ಸರ್ಕಾರ ಹೆಚ್ಚು ಸಾಲ ಮಾಡದ ಕಾರಣ ಕಾಂಗ್ರೆಸ್ ಹೆಚ್ಚುತ್ತಿರುವ ಸಾಲದ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ.
ಕೇಂದ್ರದ ನಿಧಿಯು ಬಳಸಬಹುದಾದ ಉಚಿತ ನಗದು ಸಂಗ್ರಹವಲ್ಲ. ಅದು ಪ್ರಜೆಗಳು ಕಷ್ಟಪಟ್ಟು ದುಡಿದ ಹಣ. ಸರ್ಕಾರವು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ 48 ಲಕ್ಷ ಕೋಟಿ ರೂಪಾಯಿಗಳನ್ನು ಕಳುಹಿಸಿದೆ ಮತ್ತು ಸೋರಿಕೆ ತಡೆಯುವ ಮೂಲಕ 4.31 ಲಕ್ಷ ಕೋಟಿ ರೂಪಾಯಿಗಳನ್ನು ಉಳಿಸಿದೆ ಎಂದು ಅವರು ತಿಳಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 