ಪೆರು ಅನಿಲ ಟ್ರಕ್ ಸ್ಫೋಟ : ಮೃತರ ಸಂಖ್ಯೆ 16 ಕ್ಕೆ ಏರಿಕೆ
ಲಿಮಾ, ಜ 30, ಪೆರು ರಾಜಧಾನಿ ಲಿಮಾದಲ್ಲಿ ಕಳೆದ ವಾರ ಸಂಭವಿಸಿದ ಅನಿಲ ಟ್ಯಾಂಕರ್ ಟ್ರಕ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜನವರಿ 23 ರಿಂದ ಲೊಯೆಜಾ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ 27 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ತೀವ್ರವಾದ ಸುಟ್ಟಗಾಯಗಳಾಗಿದ್ದು ಆ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ. 10 ಮಕ್ಕಳು ಸೇರಿದಂತೆ 31 ಜನರು ಆಸ್ಪತ್ರೆಗೆ ದಾಖಲಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಸಚಿವಾಲಯ ಹೇಳಿದೆ.ಸಂತ್ರಸ್ತರ ಸುಟ್ಟ ಗಾಯಗಳ ಕಸಿಗಾಗಿ ಪೆರುವಿಗೆ 20,000 ಸೆಂಟಿಮೀಟರ್ ಮಾನವ ಚರ್ಮವನ್ನು ಕಳುಹಿಸಲಾಗಿದೆ ಎಂದು ಬ್ರೆಜಿಲ್ ನ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.ನಗರದ ವಿಲ್ಲಾ ಎಲ್ ಸಾಲ್ವಡಾರ್ ಜಿಲ್ಲೆಯಲ್ಲಿ ಅದೇ ದಿನ ಸಂಭವಿಸಿದ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ 11 ಜನರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ. ರಸ್ತೆಯ ಬಂಪ್‌ಗೆ ಟ್ಯಾಂಕರ್ ಟ್ರಕ್ ಡಿಕ್ಕಿ ಹೊಡೆದು ಅನಿಲ ಸೋರಿಕೆಗೆ ಕಾರಣವಾಯಿತು. ಇದರಿಂದ ಬೆಂಕಿ ಹೊತ್ತುಕೊಂಡು ಕಿಡಿ ಹಾರಿ ಹತ್ತಿರದ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 