ನಿಷೇಧಾಜ್ಞೆ ಜಾರಿ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ, ವಿಚಾರಣೆಗೆ ನಾಳೆಗೆ
ಬೆಂಗಳೂರು, ಡಿ 19 : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ನಿಷೇಧಾಜ್ಞೆ ಪ್ರಶ್ನಿಸಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಮತ್ತು ಶಾಸಕಿ ಸೌಮ್ಯ ರೆಡ್ಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಭಾರತೀಯ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು, ಪ್ರತಿಭಟನೆಗಳನ್ನು ಹತ್ತಿಕ್ಕುವುದು ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ರಾಜ್ಯದಲ್ಲಿ ಸಿಎಎ ವಿರುದ್ಧ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಹೇರಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ರಾಜ್ಯಾದ್ಯಂತ ವಿಧಿಸಿರುವ ನಿಷೇಧಾಜ್ಞೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 