ಶಿಗ್ಗಾವ್

ಸರ್ಕಾರಿ ನೌಕರರ 3 ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸಲು ಮನವಿ

ಸರ್ಕಾರಿ ನೌಕರರ 3 ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸಲು ಮನವಿ

ಶಿಗ್ಗಾವಿ 12: ರಾಜ್ಯ ಸರ್ಕಾರಿ ನೌಕರರ 3 ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ಈಗಾಗಲೇ ತುಂಬಾ ವಿಳಂಬವಾಗಿರುವುದರಿಂದ, ಶೀಘ್ರ ಸರ್ಕಾರಿ ಆದೇಶ ಹೊರಡಿಸಿ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಶಿಗ್ಗಾವಿ ತಾಲ್ಲೂಕಿನ ನೌಕರರರು ಹಾಗೂ ಕುಟುಂಬದವರ ಪರವಾಗಿ ಮನವಿಯನ್ನು ತಹಶೀಲ್ದಾರ ಸಂತೋಷ ಹಿರೇಮಠ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು. 

ಸರ್ಕಾರದ ಮುಂದಿರುವ ನೌಕರರ ಪ್ರಮುಖ ಬೇಡಿಕೆಗಳು : ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ  ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು : ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ. 27.50ಅಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ ದಿನಾಂಕ:01-07-2022 ರಿಂದ ಅನ್ವಯವಾಗುವಂತೆ ವೇತನ ನಿಗಧಿಪಡಿಸಿ, ದಿ: 1-4-2024ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು. 

ಎನ್‌.ಪಿ.ಎಸ್‌. ರದ್ದು ಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು : ರಾಜ್ಯದಎನ್‌.ಪಿ.ಎಸ್‌. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌.ಪಿ.ಎಸ್‌. ನೌಕರರನ್ನು ಓ.ಪಿ.ಎಸ್‌. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್‌.ಪಿ.ಎಸ್‌. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. 

ಕರ್ನಾಟಕ ರಾಜ್ಯಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್‌.ಎಸ್) ಅನುಷ್ಠಾನಗೊಳಿಸುವುದು : 

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ “ಕರ್ನಾಟಕಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್‌.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ  ಘೋಷಿಸಿತ್ತು.  ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 5-9-2022 ರಂದು ಸರ್ಕಾರಿಆದೇಶ ಹೊರಡಿಸಿರುತ್ತದೆ. 

ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಕಾರ್ಯದರ್ಶಿ ರಮೇಶ ಹರಿಜನ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ಸೇರಿದಂತೆ ತಾಲೂಕಿನ ನೌಕರರು ಉಪಸ್ಥಿತರಿದ್ದರು. 


ಸುದ್ದಿ ಓದಿ