ಮೇವುಂಡಿ ಬಳಿ ಪೈಪ್ಲೈನ್ ದುರಸ್ತಿ: ನೀರು ಪೂರೈಕೆಯಲ್ಲಿ ವ್ಯತ್ಯಯ

ಮೇವುಂಡಿ ಬಳಿ ಪೈಪ್ಲೈನ್ ದುರಸ್ತಿ: ನೀರು ಪೂರೈಕೆಯಲ್ಲಿ ವ್ಯತ್ಯಯ  Pipeline repair near Mevundi: Disruption in water supply

ಮೇವುಂಡಿ ಬಳಿ ಪೈಪ್ಲೈನ್ ದುರಸ್ತಿ: ನೀರು ಪೂರೈಕೆಯಲ್ಲಿ ವ್ಯತ್ಯಯ  

ಲಕ್ಷ್ಮೇಶ್ವರ, ಸೆ.13: ಪಟ್ಟಣಕ್ಕೆ ತುಂಗಭದ್ರಾ ನದಿಯಿಂದ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪೈಪ್ಲೈನ್ ಮೇವುಂಡಿ ಸಮೀಪ ಒಡೆದು ನೀರು ಪೋಲಾಗುತ್ತಿರುವ ಹಿನ್ನೆಲೆಯಲ್ಲಿ ಪೈಪ್ಲೈನ್ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.  ಪೈಪ್ಲೈನ್ ದುರಸ್ತಿಯಿಂದಾಗಿ ಲಕ್ಷ್ಮೇಶ್ವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ವಾರ್ಡ್ಗಳ ಸಾರ್ವಜನಿಕರು ಸಹಕರಿಸಬೇಕು ಎಂದು ಲಕ್ಷ್ಮೇಶ್ವರ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.