ಸೆ.5 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಾಧಿಕಾರ ಸಭೆ ಆಯೋಜನೆ
ಧಾರವಾಡ 31: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಾರ್ಯ ವಿಧಾನಗಳು ಮತ್ತು ಸದರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಸೆಪ್ಟೆಂಬರ್ 5 ರಂದು ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆಗಳ ಧಾರವಾಡ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ವಹಿಸಲಿದ್ದು, ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು ಭಾಗವಹಿಸಲಿದ್ದಾರೆ.
ಸಭೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಂಟಿ ನುರ್ದೇಶಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಅಗತ್ಯ ಮಾಹಿತಿ ಹಾಗೂ ಪ್ರಗತಿ ವರದಿಯೊಂದಿಗೆ ಖುದ್ದು ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.