ಕೂಡಗಿಯಲ್ಲಿ ಅಂತರರಾಷ್ಟ್ರೀಯ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ: ಶಾಸಕ ಶಿವಾನಂದ ಪಾಟೀಲ
Plans to build an international agricultural market in Kudagi: MLA Shivananda Patil
ಕೊಲ್ಹಾರ 17 : ದೇಶದೆಲ್ಲೆಡೆ ಖ್ಯಾತಿ ಗಳಿಸಿರುವ ಈ ಭಾಗದ ರೈತರ ವಿಳ್ಯದೆಲೆ ಮತ್ತು ಈರುಳ್ಳಿ ಖರೀದಿ ಮತ್ತು ಮಾರಾಟಕ್ಕಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಕೂಡಗಿಯಲ್ಲಿ ನಿರ್ಮಿಸುವ ಚಿಂತನೆಯಿದ್ದು ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯೋಜನೆ ಇದೆ ಎಂದು ಶಾಸಕ ಶಿವಾನಂದ ಪಾಟೀಲ ಭರವಸೆ ನೀಡಿದರು. ಸಮೀಪದ ಕೂಡಗಿ ಗ್ರಾಮದ ಮಾರುತೇಶ್ವರ ದೇವಸ್ಥಾನ ಬಳಿ ಸಮುದಾಯ ಭವನ, ಎಪಿಎಂಸಿ ಬಳಿ ಸಿಸಿ ರಸ್ತೆ, ಕೂಡಗಿ ತಾಂಡಾದ 2 ಕಡೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಭಾಗದ ಜನ ಎನ್ಟಿಪಿಸಿಗಾಗಿ ತಮ್ಮ ಫಲವತ್ತಾದ ಜಮೀನನ್ನು ಕಳೆದುಕೊಂಡಿದ್ದಾರೆ. ಆದರೆ ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ಎನ್ಟಿಪಿಸಿ ಇನ್ನೂ ನೀಡಿಲ್ಲ ಎಂದರು. ಕೂಡಗಿ ತಾಂಡಾದಲ್ಲಿ 33 ಕೊಳವೆ ಭಾವಿಗಳಿದ್ದರೂ ಸ್ಥಳೀಯ ನಿವಾಸಿಗರಿಗೆ ಕುಡಿಯುವ ನೀರಿನ ತೊಂದರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಕುಡಿಯುವ ನೀರಿನ ಬಗ್ಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ವೇ.ಗಂಗಾಧರಯ್ಯ ಹಿರೇಮಠ ಪೂಜೆ ನೆರವೇರಿಸಿದರು. ಪ್ರಮುಖರಾದ ಮೈರಾಜಪೀರಾ ಜಾಗೀರದಾರ, ತಾನಾಜಿ ನಾಗರಾಳ, ಕಲ್ಲು ದೇಸಾಯಿ, ರಫೀಕ ಪಕಾಲಿ, ಭರ್ಮಣ್ಣ ಬಿದರಿ, ಶಿವಪ್ಪ ಗುಡದಿನ್ನಿ, ಚಂದ್ರಶೇಖರ ಜುಗತಿ, ಸಂಗನಗೌಡ ಪಾಟೀಲ, ಮಹ್ಮದಆರೀಪ್ ತಾಳಿಕೋಟಿ, ರಾಜು ರಾಠೋಡ, ಈಶ್ವರ ಜಾಧವ, ಬಾಬು ಕೋಲಾರ, ಶಫೀಕ ಜಾಗೀರದಾರ, ಕಾಶಿಬಾಯಿ ಉಳ್ಳಾಗಡ್ಡಿ, ಹೈದರಿ್ಲ ಇನಾಮದಾರ ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 