ಬೈಲಹೊಂಗಲ

ಕೆರೆಯಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ

ಕೆರೆಯಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ
ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಶ್ರಯದಲ್ಲಿ ಕೆರೆಯಂಗ

ಬೈಲಹೊಂಗಲ12:  ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಶ್ರಯದಲ್ಲಿ ಕೆರೆಯಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜರುಗಿತು. 

ಗ್ರಾಪಂ ಅಧ್ಯಕ್ಷ ಬಸವರಾಜ್ ಗಡನವರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ ಮೂಲಕ ಡಾ.ವಿರೇಂದ್ರ ಹೆಗಡೆಯವರು ಸಾಕಷ್ಟು ಸಮಾಜಮುಖಿ ಕಾರ್ಯ ಮಾಡುತ್ತಿದ್ದು, ಪ್ರತಿ ಗ್ರಾಮಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ಅಭಿವೃದ್ಧಿಯತ್ತ ಸಾಗಬೇಕೆಂಬ ಸಮಾಜದಲ್ಲಿ ಮಹತ್ತರವಾದ ಯೋಜನೆಗಳನ್ನು ಜಾರಿಗೆ ತಂದು ಜನರನ್ನು ಸಶಕ್ತರನ್ನಾಗಿ ಮಾಡುತ್ತಿದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದರು.                       

ಗ್ರಾಮದ ಸರ್ಕಾರಿ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಎಸ್‌. ಎಸ್‌. ಪಾಟೀಲ್ ಮಾತನಾಡಿ, ಗಿಡ-ಮರ ಬೆಳೆಸುವದು ಪ್ರಸ್ತುತ ದಿನಗಳಲ್ಲಿ ಅತ್ಯವಶ್ಯವಾಗಿದ್ದು, ಪರಿಸರ ನಾಶದಿಂದ ಮಾನವನ ಮೇಲೆ ಹಲವಾರು ದುಷ್ಪರಿಣಾಮಗಳು ಬೀರಲಿದ್ದು, ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಸೂಕ್ತವಾಗಿದೆ ಎಂದರು. 

ಎಸ್‌ಕೆಡಿಆರ್‌ಡಿಪಿ ಕೃಷಿ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಸ್ವಾಗತಿಸಿದರು. ಮೇಲ್ವಿಚಾರಕಿ ವಾಣಿ ಮಡಿವಾಳರ ನಿರೂಪಿಸಿದರು. ಸೇವಾ ಪ್ರತಿನಿಧಿ ನಿರ್ಮಲ ಹೋಳಿ ವಂದಿಸಿದರು.  



ಸುದ್ದಿ ಓದಿ