ಪೋಲಿಸ್ -ಸಾರ್ವಜನಿಕ ಸಮನ್ವಯ ಸಭೆ: ಸುರಕ್ಷಿತ ಸಂಚಾರಕ್ಕೆ ಜಾಗೃತಿ
Police-Public Coordination Meeting: Awareness for Safe Traffic
ಬಳ್ಳಾರಿ 25: ನಗರದ ಗಾಂಧಿನಗರ ಪೊಲೀಸ್ ಠಾಣೆ ವತಿಯಿಂದ ಪೋಲಿಸ್ -ಸಾರ್ವಜನಿಕ ಸಮನ್ವಯ ಸಭೆಯನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ಸ್ಥಳೀಯ ಕುಂದುಕೊರತೆಗಳ ಕುರಿತು ಚರ್ಚಿಸಲಾಯಿತು.ಸಿದ್ಧಾರ್ಥ ಕಾಲೋನಿಯ ಎಸ್ಸಿ/ಎಸ್ಟಿ ಮುಖಂಡರನ್ನು ಆಹ್ವಾನಿಸಿ ನಡೆದ ಸಭೆಯಲ್ಲಿ ಪ್ರದೇಶದ ಮೂಲಭೂತ ಸೌಲಭ್ಯಗಳು, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯ ವಿನಿಮಯ ನಡೆಯಿತು. ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಮಾತನಾಡಿದ ಗಾಂಧಿನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಚಂದ್ರ, ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು. ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸಬಹುದು ಎಂದು ಹೇಳಿದರು.ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಇಂತಹ ಸಮನ್ವಯ ಸಭೆಗಳು ಅಗತ್ಯವಾಗಿದ್ದು, ಜನರು ಯಾವುದೇ ಸಮಸ್ಯೆಗಳಿದ್ದರೂ ನಿರ್ಭಯವಾಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು.ಸಭೆಯಲ್ಲಿ ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 