ಬೀದಿ ನಾಯಿಗೆ ಗುಂಡಿಕ್ಕಿದ ವೃದ್ಧನನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ನ.11 : ನಿರಂತರವಾಗಿ ಮನೆಯ ಬಳಿ ಬಂದು ಬೊಗಳುತ್ತಿದ್ದ ಬೀದಿ ನಾಯಿಗೆ ವೃದ್ಧರೊಬ್ಬರು ಏರ್ಗನ್ನಿಂದ 3 ಗುಂಡು ಹಾರಿಸಿರುವ ಘಟನೆ ಜಯನಗರ 5ನೇ ಬ್ಲಾಕ್ನಲ್ಲಿ ನಡೆದಿದ್ದು, ನಾಯಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಗಾಯಗೊಂಡಿರುವ ನಾಯಿಯನ್ನು ಜಯನಗರ ಪಶು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಅದನ್ನು ಜೆ.ಪಿ. ನಗರದ ಜೀವ ಪೆಟ್ ಕ್ಲಿನಿಕ್ ಗೆ ವರ್ಗಾಯಿಸಲಾಗಿದೆ. ಅಲ್ಲಿ ಪಶು ವೈದ್ಯರು ನಾಯಿಯ ದೇಹವನ್ನು ಸ್ಕ್ಯಾನ್ ಮಾಡಿ, ಅಲ್ಲಿದ್ದ 3 ಗುಂಡುಗಳನ್ನು ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.
ನಾಯಿ ಮೇಲೆ ಗುಂಡು ಹಾರಿಸಿರುವ 85 ವರ್ಷ ವಯಸ್ಸಿನ ವೃದ್ಧರನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 