ಸೆ. 6ರಂದು ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ: ಗದಗದಲ್ಲಿ ಬಿಗಿ ಭದ್ರತೆ
Police constable recruitment exam on Sept. 6: Tight security in Gadag
ಲೋಕದರ್ಶನ ವರದಿ
ಗದಗ, ಸೆ. 4: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆ. 6ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೆಬಲ್ (ಸಿಎಆರಿ್ಡಎಆರ್) ನೇಮಕಾತಿ ಪರೀಕ್ಷೆಯನ್ನು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಗದಗ ನಗರದಲ್ಲಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಗದಗ ನಗರದ ಎಚ್.ಸಿ.ಇ.ಎ.ಎಸ್. ಪದವಿಪೂರ್ವ ಕಾಲೇಜು, ಜಿಲ್ಲಾ ಕ್ರೀಡಾಂಗಣದ ಬಳಿಯ ಮನೋರಮಾ ಪಿ.ಯು. ಕಾಲೇಜು, ಕೆಎಲ್ಇ ಸೊಸೈಟಿಯ ಜಗದ್ಗುರು ತೋಂಟದಾರ್ಯ ಪಿಯು ಕಾಲೇಜು, ಸನ್ಮಾರ್ಗ ಪಿಯು ಕಾಲೇಜು, ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ತೋಂಟದ ಸಿದ್ದೇಶ್ವರ ಪಿಯು ಕಾಲೇಜು, ಭೂಮರಡ್ಡಿ ಸರ್ಕಲ್ನ ಸರ್ಕಾರಿ ಪದವಿಪೂರ್ವ ಕಾಲೇಜು, ಮುಳಗುಂದ ರಸ್ತೆಯ ಕರ್ನಾಟಕ ಪದವಿಪೂರ್ವ ಕಾಲೇಜು ಹಾಗೂ ಮಲ್ಲಸಮುದ್ರ ಅಂಜುಮನ್ ಕಾಲೇಜು ಕ್ಯಾಂಪಸ್ಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಸೆ. 6ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು, ನಕಲಿ ಅಭ್ಯರ್ಥಿಗಳ ಹಾಜರಾತಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ್ಠದ್ಡ್ತಿ್ಪಿಹಿ2023್ಘ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್ ಅಂಗಡಿಗಳು, ಬುಕ್ಸ್ಟಾಲ್ಗಳು ಹಾಗೂ ಫೋಟೋಕಾಪಿ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಅಭ್ಯರ್ಥಿಗಳು ಹಾಗೂ ಅನಧಿಕೃತ ವ್ಯಕ್ತಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ, ಕ್ಯಾಮೆರಾ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಸೂಚಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 