ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ, ಐದು ದ್ವಿಚಕ್ರ ವಾಹನ ವಶ
Police crack bike theft case; two arrested, five two-wheelers seized
ಲೋಕದರ್ಶನ ವರದಿ
ಬೆಳಗಾವಿ, ಆ.02: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ಐದು ಮೋಟಾರ್ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ ಸುಮಾರು ?1.30 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 1ರಂದು ದಾಖಲಾದ ಪ್ರಕರಣದ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಕಲಂ 303(2), 317(2) ಹಾಗೂ 3(5)ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ವೇಳೆ ಖಡಕಲಾಟ ಗ್ರಾಮದ ಸ್ವಪ್ನಿಲ್ ಅನಿಲ್ ಶಾರಬಿದ್ರೆ (27) ಹಾಗೂ ರೋಹಿತ್ ಬಾಬಾಸಾಬ ದಾನವಾಡೆ (24) ಅವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಐದು ಕಳವು ಬೈಕ್ಗಳನ್ನು ವಶಪಡಿಸಿಕೊಂಡು, ಮುಂದಿನ ತನಿಖೆ ಮುಂದುವರಿದಿದೆ.
ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಬಸರಗಿ ಹಾಗೂ ಗೋಪಾಲಕೃಷ್ಣ ಗೌಡ ಅವರ ಮೇಲ್ವಿಚಾರಣೆಯಲ್ಲಿ, ಚಿಕ್ಕೋಡಿ ಡಿವೈಎಸ್ಪಿ ನೇತೃತ್ವದಲ್ಲಿ ಖಡಕಲಾಟ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದರು. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 