ಬೈಲಹೊಂಗಲ

ಜನರ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ಸಹಾಯ-ಸಹಕಾರ ನೀಡಲಿದೆ: ನಾಯಕ

ಜನರ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ಸಹಾಯ-ಸಹಕಾರ ನೀಡಲಿದೆ: ನಾಯಕ

ಬೈಲಹೊಂಗಲ: ಪೊಲೀಸ್ ಇಲಾಖೆ ಇರುವುದು ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ, ರಕ್ಷಣೆ ನೀಡಲು. ಪರಿಶಿಷ್ಟ ಜಾತಿ, ಪಂಗಡದವರ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ಸಹಾಯ-ಸಹಕಾರ ನೀಡಲಿದೆ. ಏನೇ ಸಮಸ್ಯೆ ಇದ್ದರೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸುತ್ತೇವೆ ಹಾಗೂ ಸಮಾಜದವರ ಸಮಸ್ಯೆ ಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದೆಂದು ಡಿವಾಯಎಸ್ಪಿ ರವಿ ನಾಯಕ ಹೇಳಿದರು.

 ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯನ್ನು ಪಟ್ಟಣದ ಡಿವಾಯ್ಎಸ್ಪಿ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

ಸಿಪಿಐ ಪಂಚಾಕ್ಷರಿ ಸಾಲಿಮಠ ಮಾತನಾಡಿ, ಪ್ರತಿಯೊಬ್ಬರೂ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ಪೊಲೀಸ್ ಇಲಾಖೆಗೆ ತಿಳಿಸಬೇಕು. ಇಲಾಖೆಗೆ ಬರಲು ಆಗದಿದ್ದರೆ 112 ಕ್ಕೆ ಕರೆ ಮಾಡಿ, ತಕ್ಷಣ ತಮ್ಮ ಹತ್ತಿರ ಬಂದು ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದೆಂದರು.ಸಮಾಜದ ಮುಖಂಡರು ಮಾತನಾಡಿ ಎಸ್ಸಿ, ಎಸ್ಟಿ ಜನಾಂಗದವರಿಗೆ ಹಲವು ಕಡೆ ಸ್ಮಶಾನ ಭೂಮಿಯ ಕೊರತೆ ಇದ್ದು,ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಸ್ಮಶಾನ ಭೂಮಿ ವ್ಯವಸ್ಥೆ ಮಾಡಬೇಕೆಂದರು. ಹಲವು ಕಡೆ ನೀರಿನ ಸಮಸ್ಯೆ ಇದೆ. ಕೆಲ ಠಾಣೆಗಳಲ್ಲಿ ಎಸ್ಸಿ, ಎಸ್ಟಿ ಜನಾಂಗದವರಿಗೆ ಪೊಲೀಸರು ಸರಿಯಾಗಿ ಸ್ಪಂದನೆ ನೀಡುತ್ತಿಲ್ಲವೆಂದು ಆರೋಪಿಸಿದರು.ಇದಕ್ಕೆ ಸ್ಪಂದಿಸಿದ ಪೊಲೀಸ್ ಅಧಿಕಾರಿಗಳು, ಸಂಬಂಧ ಪಟ್ಟ ಠಾಣೆಗಳಿಗೆ ಸೂಚನೆ ನೀಡಲಾಗುವುದು ಹಾಗೂ ಏನೇ ಸಮಸ್ಯೆ ಇದ್ದರೂ ತಕ್ಷಣ ಸ್ಪಂದಿಸಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಉಪವಿಭಾಗ ಪೊಲೀಸ್ ಅಧಿಕಾರಿಗಳು ಹಾಗೂ ಎಸ್ಸಿ, ಎಸ್ಟಿ ಮುಖಂಡರು ಉಪಸ್ಥಿತರಿದ್ದರು 

ಸುದ್ದಿ ಓದಿ